ದಾವಣಗೆರೆ : ಸಿಎಂ ಸಿದ್ದರಾಮಯ್ಯ ಅವರ ನವಕರ್ನಾಟಕ ನಿರ್ಮಾಣ ಯಾತ್ರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನವಕರ್ನಾಟಕ ನಿರ್ಮಾಣ ಯಾತ್ರೆ ದಾವಣಗೆರೆ ಜಿಲ್ಲೆ ತಲುಪಿದೆ, ಇಂದು ಸಿದ್ದರಾಮಯ್ಯ ಅವರು ದಾವಣಗೆರೆಯಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದ ಅಭಿವೃದ್ಧಿಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ.ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಜೊತೆಗೆ ಮೂರು ಬಹಿರಂಗ ಸಮಾವೇಶದಲ್ಲಿಯೂ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
ಹಾಗೂ ಹಲವು ಯೋಜನೆಗಳ ಫಲಾನುಭವಿಗಳಿಗೆ ಚೆಕ್ ವಿತರಣೆಯನ್ನು ಮುಖ್ಯಮಂತ್ರಿಗಳು ಮಾಡಲಿದ್ದಾರೆ. ಬೆಳಿಗ್ಗೆ 11 ಕ್ಕೆ ಹೊನ್ನಾಳಿ, ಮಧ್ಯಾಹ್ನ 1ಕ್ಕೆ ಹರಪನಹಳ್ಳಿ, 3ಕ್ಕೆ ಜಗಳೂರಿನಲ್ಲಿ ಬಹಿರಂಗ ಸಮಾವೇಶ ಉದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಲಿದ್ದಾರೆ. ಮುಖ್ಯಮಂತ್ರಿಗಳ ಜೊತೆಗೆ ಸ್ಥಳಿಯ ಕಾಂಗ್ರೆಸ್ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕಾಂಗ್ರೆಸ್ ಸರ್ಕಾರದ ಸಾಧನೆಗಳ ಬಗ್ಗೆ ಮುಖ್ಯಮಂತ್ರಿಗಳು ಭಾಷಣದಲ್ಲಿ ಪ್ರಸ್ತಾಪ ಮಾಡಲಿದ್ದಾರೆ.
Comments