ಮಹದಾಯಿ ವಿಚಾರದಲ್ಲಿ ಪ್ರಧಾನಿಯವರನ್ನು ಮಧ್ಯಸ್ಥಿಕೆಗೆ ತರಬೇಕಿತ್ತು : ವಾಟಾಳ್ ಆಕ್ರೋಶ

ಗೋವಾ ಮುಖ್ಯಮಂತ್ರಿಯಿಂದ ಪತ್ರ ಬರೆಸಿಕೊಂಡು ಓದುವುದಕ್ಕಿಂತ ಎಲ್ಲಾ ಸಂಸದರು ಪ್ರಧಾನಿ ಅವರ ಮೇಲೆ ಒತ್ತಡ ತಂದು ಅವರ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕಿತ್ತು ಎಂದು ತಿಳಿಸಿದರು. ಅದೇ ರೀತಿ ರಾಜ್ಯ ಸರ್ಕಾರ ಕೂಡ ಮೇಕೆದಾಟು ಯೋಜನೆಯನ್ನು ಕೂಡಲೇ ಆರಂಭಿಸಬೇಕು. ಈ ಎಲ್ಲವನ್ನು ವಿರೋಧಿಸಿ ಇದೇ 28ರಂದು ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಕರಾಳದಿನ ಆಚರಿಸಲಾಗುವುದು.
ಮಹದಾಯಿ, ಕಳಸಾ-ಬಂಡೂರಿ ರಾಜಕೀಯ ಸ್ವರೂಪ ಪಡೆಯುತ್ತಿರುವುದಕ್ಕೆ ಕನ್ನಡ ಒಕ್ಕೂಡ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿದ ಕನ್ನಡ ಒಕ್ಕೂಟದ ಮುಖಂಡರು ಈ ಯೋಜನೆಗೆ ರಾಜಕೀಯ ಮುಖಂಡರು ನಡೆಸುತ್ತಿರುವ ಬೃಹನ್ ನಾಟಕವನ್ನು ತೀವ್ರವಾಗಿ ಖಂಡಿಸಿದರು.
ಈ ಯೋಜನೆ ಉತ್ತರ ಕರ್ನಾಟಕ ಭಾಗದ ಜನರ ಜೀವನ್ಮರಣದ ಪ್ರಶ್ನೆಯಾಗಿದೆ. ಇದು ರಾಜಕೀಯ ಸ್ವರೂಪ ಪಡೆಯುತ್ತಿರುವುದು ಅತ್ಯಂತ ವಿಷಾದದ ಸಂಗತಿ. ರಾಜಕೀಯ ಮುಖಂಡರ ಇಚ್ಚಾಸಕ್ತಿ ಕೊರತೆಯಿಂದ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದರು. ಮಹದಾಯಿ ಯೋಜನೆ ವಿವಾದದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಜಾರಿಬಿದ್ದಿದ್ದಾರೆ. ಆತುರದ ಕ್ರಮ ಅನುಸರಿಸಿ ಯಡವಟ್ಟು ಮಾಡಿಕೊಂಡಿದ್ದಾರೆ. ಈ ಯೋಜನೆ ಸಂಬಂಧ ಗೋವಾ ಸಿಎಂ ರಾಜ್ಯದ ಮುಖ್ಯಮಂತ್ರಿ ಅವರಿಗೆ ಪತ್ರ ಬರೆಯಬೇಕಿತ್ತು. ಅದನ್ನು ಬಿಟ್ಟು ಯಡಿಯೂರಪ್ಪನವರಿಗೆ ಪತ್ರ ಬರೆಯುತ್ತಾರೆ ಎಂದರೆ ಅವರಿಗೆ ಎಷ್ಟು ಜ್ಞಾನ ಇರಬೇಕು. ಅವರು ಬರೆದಿರುವ ಪತ್ರಕ್ಕೆ ಯಾವುದೇ ಬೆಲೆ ಇರುವುದಿಲ್ಲ. ಹೀಗಾಗಿ ಈ ಯೋಜನೆ ಇನ್ನಷ್ಟು ಹಳ್ಳಹಿಡಿಯುವ ಆತಂಕ ಎದುರಾಗಿದೆ ಎಂದು ಹೇಳಿದರು.
Comments