ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಕುರಿತು ಮಹತ್ವದ ಚರ್ಚೆ
ಆಕಾಂಕ್ಷಿ ಅಭ್ಯರ್ಥಿಗಳ ಆಯ್ಕೆ ಹಾಗೂ ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮತ್ತೊಂದು ಸುತ್ತಿನ ಸರಣಿ ಸಭೆ ಆರಂಭಿಸಲಿದ್ದಾರೆ.
ಇಂದು ಜೆ.ಪಿ.ಭವನದಲ್ಲಿ ಕೋಲಾರ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ವಿಧಾನಸಭೆ ಕ್ಷೇತ್ರವಾರು ಸಭೆ ನಡೆಯಲಿವೆ. ಪಕ್ಷದ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಹತ್ವದ ಚರ್ಚೆ ನಡೆಯಲಿದೆ.ಇದೇ ವೇಳೆ ಪಕ್ಷ ಸಂಘಟನೆಗೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಹೊಣೆಗಾರಿಕೆಯನ್ನು ನಿಗದಿಪಡಿಸುವ ಕೆಲಸವೂ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಎಚ್.ಡಿ. ಕುಮಾರಸ್ವಾಮಿ ಅನಾರೋಗ್ಯದ ಕಾರಣ 3-4 ದಿನ ಯಾವುದೇ ಸಭೆ, ಸಮಾರಂಭ ನಡೆದಿರಲಿಲ್ಲ.
Comments