ಎಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಯಾರಿಗೆ ?

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಮೈಸೂರು ಜಿಲ್ಲೆ ಎಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗಾಗಿ ಪೈಪೋಟಿ ಹೆಚ್ಚಾಗಿದೆ. ಇತ್ತೀಚೆಗೆ ತಾನೇ ಜೆಡಿಎಸ್ ಗೆ ಸೇರ್ಪಡೆಯಾಗಿರುವ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಹಾಗೂ ಶಾಸಕರಾಗಿದ್ದ ಅವಧಿಯಲ್ಲೇ ಅನಾರೋಗ್ಯಕ್ಕೆ ತುತ್ತಾಗಿ ನಿಧನರಾದ ದಿವಂಗತ ಚಿಕ್ಕಮಾದು ಅವರ ಪುತ್ರ ಅನಿಲ್ ನಡುವೆ ಜೆಡಿಎಸ್ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ.
ಅತ್ಯಂತ ಹಿರಿಯರಾಗಿರುವ ಮಾಜಿ ಶಾಸಕ ಚಿಕ್ಕಣ್ಣನವರಿಗೆ ಟಿಕೆಟ್ ನೀಡುವಂತೆ ಒಲವು ಹೆಚ್ಚುತ್ತಿದೆ.ಚಿಕ್ಕಣ್ಣನವರಿಗೆ ಜೆಡಿಎಸ್ ಟಿಕೆಟ್ ನೀಡುವಂತೆ ಸ್ಥಳೀಯ ಜೆಡಿಎಸ್ ಮುಖಂಡರು ಹಾಗು ಹೆಚ್ಚಿನ ಕಾರ್ಯಕರ್ತರು ಅನುಮತಿ ನೀಡಿದ್ದಾರೆ. ಆದರೆ ಇತ್ತ ಚಿಕ್ಕಮಾದು ಅವರ ಪುತ್ರ ಅನಿಲ್ ಕೂಡಾ ಟಿಕೆಟ್ಗೆ ಪ್ರಯತ್ನ ನಡೆಸುತ್ತಿದ್ದು, ಜೆಡಿಎಸ್ ವರಿಷ್ಠರ ನಿರ್ಧಾರದ ಬಗ್ಗೆ ಕುತೂಹಲ ಮೂಡಿಸಿದೆ.
Comments