ಬಿಜೆಪಿಯ ಮತ್ತೊಂದು ವಿಕೆಟ್ ಜೆಡಿಎಸ್ ಪಾಲಾಗಲಿದ್ಯಾ?
ತವರು ಕ್ಷೇತ್ರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಂಡಾಯದ ಬಿಸಿ ತಟ್ಟಿದೆ. ಸೊರಬ ತಾಲೂಕು ಬಿಜೆಪಿ ಮುಖಂಡ ಡಾ.ರಾಜು ಎಂ.ತಲ್ಲೂರು ಪಕ್ಷ ತೊರೆದಿದ್ದಾರೆ.
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಡಾ.ರಾಜು ಎಂ.ತಲ್ಲೂರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದರು.ಸೊರಬ ತಾಲೂಕು, ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯಾದ್ಯಂತ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದೆ. ಪಕ್ಷದ ಮುಖಂಡರು ನನಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ, ರಾಜೀನಾಮೆ ನೀಡಿದ್ದೇನೆ' ಎಂದರು.ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಸೇರ್ಪಡೆಗೊಂಡ ಬಳಿಕ ನಿಷ್ಟಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಕುಟುಂಬ ರಾಜಕಾರಣವನ್ನು ತಾಲೂಕಿನ ಜನರು ಬೇಡ ವೆನ್ನುತ್ತಿದ್ದಾರೆ ಹಾಗೂ ಕುಮಾರ್ ಬಂಗಾರಪ್ಪ ಅವರನ್ನು ಶಾಸಕರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಪರಿವರ್ತನಾ ಯಾತ್ರೆಯ ಪೂರ್ವಭಾವಿ ಸಭೆಗಳಿಗೆ ತಮ್ಮನ್ನು ಹಾಗೂ ನಿಷ್ಟಾವಂತ ಕಾರ್ಯಕರ್ತರನ್ನು ಕರೆಯದೆ ಕಡೆಗಣಿಸಲಾಗಿದೆ. ತಮ್ಮೊಂದಿಗೆ ಸುಮಾರು 10ಕ್ಕೂ ಹೆಚ್ಚು ಪಕ್ಷದ ತಾಲೂಕು ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸುತ್ತಿದ್ದಾರೆ. 2 ದಿನದಲ್ಲಿ 30 ರಿಂದ 40ಕ್ಕೂ ಹೆಚ್ಚು ಪದಾಧಿಕಾರಿಗಳು ರಾಜೀನಾಮೆ ನೀಡಲಿದ್ದಾರೆ ಎಂದರು.ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬುದು ಅಭಿಮಾನಿಗಳ ಅಪೇಕ್ಷೆಯಾಗಿದೆ. ಜೆಡಿಎಸ್ ಪಕ್ಷ ಸೇರ್ಪಡೆಗೆ ಆಹ್ವಾನ ಬಂದರೆ ಪರಿಗಣಿಸಲಿದಾರೆ ಎಂದು ಮೂಲಗಳು ತಿಳಿಸಿದೆ. ಇಲ್ಲವಾದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲಿದಾರೆ ಎಂದು ತಿಳಿದು ಬಂದಿದೆ.
Comments