ಮಹದಾಯಿ ಸಮಸ್ಯೆ ಪರಿಹಾರಕ್ಕೆ ಜೆಡಿಎಸ್ ಪ್ರಯತ್ನ
ಜೆಡಿಎಸ್ ಪಕ್ಷ ಮಹದಾಯಿ ನದಿ ನೀರಿಗಾಗಿ ಉತ್ತರ ಕರ್ನಾಟಕ ಭಾಗದ ಜನರು ನಿರಂತರವಾಗಿ ನಡೆಸುತ್ತಾ ಬಂದಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿರುವುದು ಅಷ್ಟೇ ಅಲ್ಲ. ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಪಟ್ಟಿದೆ. ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರೂ ಯಾವುದೇ ಫಲ ಸಿಗುತ್ತಿಲ್ಲ ಎಂದರು.
ಮಹದಾಯಿ ನದಿ ನೀರಿಗಾಗಿ ಉತ್ತರ ಕರ್ನಾಟಕ ಭಾಗದ ರೈತರು ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಕುಡಿಯುವ ನೀರಿಗಾಗಿ ನಿರಂತರವಾಗಿ ನಡೆಸುತ್ತಿರುವ ಉತ್ತರ ಕರ್ನಾಟಕ ಭಾಗದ ಜನಪರ ಹೋರಾಟಕ್ಕೆ ಜೆಡಿಎಸ್ ಬೆಂಬಲ ಸೂಚಿಸಿದ್ದು, ಸಮಸ್ಯೆ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಬೇಕೆಂದು ಜೆಡಿಎಸ್ ವಕ್ತಾರ ಹಾಗೂ ವಿಧಾನಪರಿಷತ್ ಸದಸ್ಯ ರಮೇಶ್‍ಬಾಬು ಆಗ್ರಹಿಸಿದ್ದಾರೆ. ಈ ಸಂಜೆಯೋಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ನೀರಿನ ವಿಚಾರದಲ್ಲಿ ರಾಜಕಾರಣ ಮಾಡುವುದನ್ನು ಬಿಡಬೇಕು. ತಮ್ಮ ತಮ್ಮ ಜವಾಬ್ದಾರಿಯನ್ನು ಅರಿತು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಮುಂದಾಗಬೇಕು ಎಂದರು. ಉತ್ತರ ಕರ್ನಾಟಕದ ಜನರ ಕುಡಿಯುವ ನೀರಿನ ಬೇಡಿಕೆಗೆ ತಾತ್ಕಾಲಿಕ ಪರಿಹಾರ ಒದಗಿಸಲು ಪ್ರಧಾನಿ ಮಧ್ಯ ಪ್ರವೇಶ ಮಾಡಿ ಆದೇಶ ಹೊರಡಿಸಬೇಕೆಂದು ಅವರು ಒತ್ತಾಯಿಸಿದರು.
Comments