ಬಡ ರೈತನ ಮಗನಿಗೆ ಮುಖ್ಯಮಂತ್ರಿ ಹುದ್ದೆ ಬಯಸದೇ ಬಂದಂತಾಗಿದೆ

ಹಿಮಾಚಲ ಪ್ರದೇಶದಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿ ಅಭ್ಯರ್ಥಿ ಸೋತ ಕಾರಣ, ಜೈರಾಮ್ ಠಾಕೂರ್ ಅವರನ್ನು ಶಾಸಕಾಂಗ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಜೈರಾಮ್ ಠಾಕೂರ್ ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರು, ಬಿ.ಜೆ.ಪಿ. ಅಧಿಕಾರದಲ್ಲಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ರಾಜಭವನದ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 1965 ರಲ್ಲಿ ಮಂಡಿ ಜಿಲ್ಲೆಯ ಬಡ ರೈತ ಕುಟುಂಬದಲ್ಲಿ ಜನಿಸಿದ ಜೈರಾಮ್ ಠಾಕೂರ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಚಂಡಿಗಡದ ಪಂಜಾಬ್ ವಿಶ್ವವಿದ್ಯಾಲಯದಿಂದ ಅವರು ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ನಂತರದಲ್ಲಿ ಆರ್.ಎಸ್.ಎಸ್., ಬಿ.ಜೆ.ಪಿ.ಯಲ್ಲಿ ಗುರುತಿಸಿಕೊಂಡ ಅವರು ಗಮನಾರ್ಹ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿ ಹುದ್ದೆ ಅವರಿಗೆ ಬಯಸದೇ ಬಂದಂತಾಗಿದೆ.
Comments