ಬರ ಮುಕ್ತ ಕರ್ನಾಟಕ ಮಾಡಲು ನಾನು ಶತಪ್ರಯತ್ನ ಮಾಡುತ್ತೇನೆ : ಸಿದ್ದರಾಮಯ್ಯ

ಭದ್ರಾ ಮೇಲ್ದಂಡೆ ಕಾಮಗಾರಿ ವೇಗವಾಗಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್‍ನಲ್ಲಿ ಪ್ರಾಯೋಗಿಕವಾಗಿ ನೀರು ಬಿಟ್ಟು ಮೇ ತಿಂಗಳಿನಲ್ಲಿ ಪೂರ್ಣವಾಗಿ ನೀರು ಕೊಟ್ಟೆಕೊಡುತ್ತೇವೆ. ಇದಕ್ಕಾಗಿ ಎಷ್ಟು ಹಣ ಬೇಕಾದರೂ ಕೊಡಲು ಸಿದ್ದ. ನೀರಾವರಿಗೆ ಮೊದಲ ಆದ್ಯತೆ ನೀಡುತ್ತಿದ್ದೇವೆ. ಕೆರೆಗಳನ್ನು ತುಂಬಿಸಲಾಗುತ್ತಿದೆ ಎಂದು ಎಂದು ಸಿಎಂ ಸಿದ್ದರಾಮಯ್ಯ ನವರು ತಿಳಿಸಿದರು.
ಮೂರು ವರ್ಷದಿಂದ ಬರಗಾಲ ಕಾಡುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಪರಿಸ್ಥಿತಿ ಬಾರದಂತೆ ಮುನ್ನೆಚ್ಚರಿಕೆ ವಹಿಸಲು ನೀರಿಗೆ ಆದ್ಯತೆ ಕೊಡಬೇಕಿದೆ ಎಂದರು. ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಕಾಡುತ್ತಿದೆ. ಹಾಗಾಗಿ ಬರ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಹೊಳಲ್ಕೆರೆಯ ಕೊಟ್ರೆನಂಜಪ್ಪ ಪದವಿ ಪೂರ್ವ ಕಾಲೇಜು ಮೈದಾನದಲ್ಲಿಂದು ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಸ್ಮರಣಾರ್ಥ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೇವೆ. ಇದೀಗ ಬರ ಮುಕ್ತ ಕರ್ನಾಟಕ ಮಾಡಲು ನಾನು ಶತಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಯಾವುದೇ ಧರ್ಮ ಇನ್ನೊಂದು ಧರ್ಮವನ್ನು ದ್ವೇಷಿಸಲಾಗದು. ಮಾನವನಾಗಿ ಹುಟ್ಟಿದ ಮೇಲೆ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ನಮ್ಮ ಧರ್ಮದ ಬಗ್ಗೆ ನಿಷ್ಟೆ ಇರಬೇಕು. ಪರಧರ್ಮದ ಬಗ್ಗೆ ಸಹಿಷ್ಣತೆ ಇರಬೇಕು. ಆಗ ಧರ್ಮವನ್ನು ಪರಿಪಾಲನೆ ಮಾಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಯಾವುದೇ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಎಂದು ಅನಂತ್‍ಕುಮಾರ್ ಹೆಗಡೆ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
Comments