ಕಾಂಗ್ರೆಸ್ ಮುಖಂಡರು ತೆನೆ ಹೊರಲು ಸಿದ್ಧ

ಹಿರಿಯ ಕಾಂಗ್ರೆಸ್ ಮುಖಂಡರು ಸಚಿವ ಮಹದೇವಪ್ಪ ಮತ್ತು ಪುತ್ರ ಸುನಿಲ್ ಬೋಸ್ ವರ್ತನೆಗೆ ಬೇಸತ್ತು ತೆನೆ ಹೊರಲು ಸಿದ್ಧವಾಗಿದ್ದಾರೆ ಎನ್ನಲಾಗಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಟಿ ನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಮೊನ್ನೆ ಕಲ್ಯಾಣ ಮಂಟಪವೊಂದರಲ್ಲಿ ಹೆಮ್ಮೆಗೆ ಸೋಮಣ್ಣ ನೇತೃತ್ವದಲ್ಲಿ ಬಂಡಾಯವೆದ್ದು ಮಹಾದೇವಪ್ಪ ಅವರಿಗೆ ಸವಾಲೊಡ್ಡಿದ್ದಾರೆ.
ಲೋಕೋಪಯೋಗಿ ಸಚಿವ ಡಾ ಎಚ್ ಸಿ ಮಹದೇವಪ್ಪ ಸ್ವ ಕ್ಷೇತ್ರದಲ್ಲಿ ಸೋಲಿನ ಭೀತಿ ಹುಟ್ಟಿಸಿದ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಎಚ್ ಸಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ ವಿರುದ್ಧ ಬಂಡಾಯವೆದ್ದು ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತೊರೆದಿದ್ದಾರೆ. ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಟಿ ನರಸೀಪುರದಲ್ಲಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಕಾರ್ಯಕರ್ತರು ಪಕ್ಷವನ್ನು ತೊರೆದು ಜೆಡಿಎಸ್ ಸೇರಲು ಸಜ್ಜಾಗಿದ್ದಾರೆ. ಟಿ ನರಸೀಪುರ ಕ್ಷೇತ್ರದ ಜೆಡಿಎಸ್ ಆಕಾಂಕ್ಷಿ ಗೋವಿಂದಯ್ಯ ಮತ್ತು ತಾಯೂರು ಪ್ರಕಾಶ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ತೆಕ್ಕೆಗೆ ಬಂದಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಸಚಿವ ಮಹದೇವಪ್ಪ ಮತ್ತು ಪುತ್ರ ಸುನೀಲ್ ಬೋಸ್ ಅವರಿಗೆ ಪಾಠ ಕಲಿಸಲು ಸಜ್ಜಾಗಿದ್ದಾರೆ.
Comments