ಲೋಕ ಸಭೆಯಲ್ಲಿ ಕ್ಷಮೆ ಕೇಳಿದ ಕೇಂದ್ರ ಸಚಿವ ಅನಂತಕುಮಾರ್ ಹೆಗೆಡೆ

ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಸದಸ್ಯರು ಅನಂತ್ ಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಿ ತೀವ್ರ ಗದ್ದಲವನ್ನುಂಟು ಮಾಡಲು ಆರಂಭಿಸುತ್ತಿದ್ದಂತೆ ಎದ್ದು ನಿಂತು ಹೇಳಿಕೆ ನೀಡಿದ ಸಚಿವ ಅನಂತ್ ಕುಮಾರ್ " ನನಗೆ ಸಂವಿಧಾನದ ಬಗ್ಗೆ ಅಪಾರವಾದ ಗೌರವವಿದೆ.
ನನಗೆ ಸಂವಿಧಾನವೇ ಶ್ರೇಷ್ಠ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ "ಎಂದರು. ಸಂವಿಧಾನ ತಿದ್ದಪಡಿ ಬಗ್ಗೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಗುರುವಾರ ಲೋಕಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ. ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಗುರುವಾರ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸತ್ತು ಭವವನದ ಹೊರಗಡೆ ಪ್ರತಿಭಟನೆ ನಡೆಸಿ, "ಅನಂತ್ ಕುಮಾರ್ ಹೆಗಡೆ ಹೇಳಿಕೆಯ ಬಗ್ಗೆ ಕ್ಷಮೆಯಾಚಿಸಬೇಕು , ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು" ಎಂದು ಒತ್ತಾಯಿಸಿತ್ತು. ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಚಿವ ಹೆಗಡೆಯವರ ಹೇಳಿಕೆಯನ್ನು ಪ್ರಸ್ತಾಪಿಸಿದರು. ಆಗ ಸಚಿವ ಅನಂತ್ ಕುಮಾರ್ ಹೆಗಡೆ ಎದ್ದು ನಿಂತು ಕ್ಷಮೆಯಾಚಿಸಿದರು. ಆ ಹಿನ್ನೆಲೆಯಲ್ಲಿ ಅನಂತ್ ಕುಮಾರ್ ಹೆಗಡೆ ಅವರ ವಿವಾದ ತಣ್ಣಗಾಗಿದೆ.
Comments