ಗೋವಾ ಮುಖ್ಯ ಕಾರ್ಯದರ್ಶಿಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲ : ಸಿದ್ದರಾಮಯ್ಯ

28 Dec 2017 3:38 PM | Politics
353 Report

ಮಹಾದಾಯಿ ವಿಚಾರದಲ್ಲಿ ಕರ್ನಾಟಕ ಮುಕ್ತವಾಗಿದೆ ಈಗಾಗಲೆ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ನಾನು ಗೋವಾ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದರೂ ಇದುವರೆಗೂ ಅವರಿಂದ ಯಾವುದೇ ಪ್ರತಿಕ್ರಿಯೆ ಇಲ್ಲ. ಒಂದು ಅಹ್ವಾನ ನೀಡಿದರೆ ಎಲ್ಲಾ ರಾಜಕೀಯ ಮುಖಂಡರ ಜೊತೆ ಮಾತುಕತೆ ನಡೆಸಿ, ಎಲ್ಲರ ಅಭಿಪ್ರಾಯ ಪಡೆದು ಗೋವಾಗೆ ತೆರಳುತ್ತೆನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಶಿರಾ ನಗರದಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರೊಂದಿಗೆ ಮಾತನಾಡಿದರು. ಮಹಾದಾಯಿ ವಿವಾದದಲ್ಲಿ ಬಿ ಎಸ್ ಯಡಿಯೂರಪ್ಪ ಮತ್ತು ಪರಿಕರ್ ನಾಟಕವಾಡಿರುವುದು ಜನತೆಗೆ ಗೋತ್ತಾಗಿದೆ. ಮುಖ ಉಳಿಸಿಕೊಳ್ಳುಲು ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ. ಒಂದು ಪಕ್ಷ ಮತ್ತೊಂದು ಪಕ್ಷದ ಕಚೇರಿ ಮುಂದೆ ಧರಣಿ ನೆಡೆಸಿದ್ದು ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲು. ನಿಜಕ್ಕೂ ಇದು ವಿರ್ಪಯಾಸ. ಮೊದಲು ಯಡಿಯೂರಪ್ಪ ಕೊಟ್ಟ ಮಾತಿನಂತೆ 7.56 ಟಿಎಂಸಿ ನೀರು ಹರಿಸಲಿ. ಜನತೆಗೆ ಕೊಟ್ಟ ಮಾತು ಉಳಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಹೇಳಿದರು.

Edited By

Shruthi G

Reported By

Madhu shree

Comments