ಬಿಜೆಪಿ ಪರಿವರ್ತನಾ ಯಾತ್ರೆ ರಥ ನಾಳೆ ಚಿಕ್ಕಮಗಳೂರಿನ ಕಡೆಗೆ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನವ ಕರ್ನಾಟಕ ಪರಿವರ್ತನಾ ಯಾತ್ರೆ ನಾಳೆ (ಡಿ.30) ನಗರಕ್ಕೆ ಆಗಮಿಸಲಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು. ಪರಿವರ್ತನಾ ಯಾತ್ರೆ ರಥವು ನಾಳೆ ಮಧ್ಯಾಹ್ನ 2.30ಕ್ಕೆ ನಗರ ಪ್ರವೇಶಿಸಲಿದ್ದು, ಬೋಳ ರಾಮೇಶ್ವರ ದೇವಸ್ಥಾನದಿಂದ ಬೈಕ್ ಜಾಥಾದ ಮೂಲಕ ಪರಿವರ್ತನಾ ಯಾತ್ರೆಯನ್ನು ವೇದಿಕೆಗೆ ಕರೆತರಲಾಗುವುದು ಎಂದು ಮಾಧ್ಯಮದವರಿಗೆ ಮಾಹಿತಿ ನೀಡಿದರು.
ನಗರದ ಡಿಎಸಿಜಿ ಪಾಲಿಟೆಕ್ನಿಕ್ ಆವರಣದಲ್ಲಿ ಬೃಹತ್ ವೇದಿಕೆ ಸಿದ್ದಗೊಂಡಿದ್ದು, ಯಡಿಯೂರಪ್ಪ ಪ್ರಮುಖ ಭಾಷಣ ಮಾಡಲಿದ್ದಾರೆ. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್‍ಕುಮಾರ್, ಅನಂತ್‍ಕುಮಾರ್ ಹೆಗಡೆ ಹಾಗೂ ಜಿಲ್ಲೆಯ ಶಾಸಕರು, ಮುಖಂಡರು ಸೇರಿದಂತೆ ಹಲವರು ಭಾಗವಹಿಸಲಿರುವ ಕಾರ್ಯಕ್ರಮಕ್ಕೆ 20 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಜಿಲ್ಲಾ ಪಂಚಾಯತ್, ತಾಪಂ, ನಗರಸಭೆ, ಗ್ರಾಪಂಗಳಲ್ಲಿ ಜನತೆ ಬಿಜೆಪಿಯನ್ನೇ ಬೆಂಬಲಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿಯೂ ನಮ್ಮ ಪಕ್ಷಕ್ಕೆ ಜಯ ದೊರೆಯಲಿದೆ ಎಂದು ಹೇಳಿದರು.
Comments