ರಾಜ್ಯದ ನೆಲ, ಜಲ ವಿಚಾರ ಬಗ್ಗೆ ಎಚ್ ಡಿ ದೇವೇಗೌಡರು ಹೇಳಿದ್ದು ಹೀಗೆ !
ರಾಜ್ಯದ ನೆಲ, ಜಲ ವಿಚಾರ ಬಂದಾಗ ನಾನು ಪಕ್ಷ ನೋಡಿಲ್ಲ. ಪಕ್ಷ ಬೇಧ ಮರೆತು ಹೋರಾಟ ಮಾಡಿದ್ದೇನೆ. ಕಾವೇರಿ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಕರೆದಿದ್ದಕ್ಕೆ ನಾನು ಹೋಗಿರಲಿಲ್ಲವೇ. ಈಗಲೂ ಅಷ್ಟೇ, ನಾನು ಪಕ್ಷ ಬಿಟ್ಟು ಹೋರಾಟಕ್ಕೆ ಸಿದ್ಧನಿದ್ದೇನೆ, ಪ್ರಧಾನಿ ಭೇಟಿ ಮಾಡಲೂ ಕೂಡ ಸಿದ್ಧನಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಮೈಸೂರು ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1962ರಲ್ಲಿ ನಾನು ಚುನಾವಣೆ ಗೆದ್ದಿದ್ದು ದೇವರ ಆಶೀರ್ವಾದಿಂದಲೇ. ನನಗೆ ದೇವರಲ್ಲಿ ಅಪಾರ ನಂಬಿಕೆ ಇದೆ. ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ್ದ ಹೋರಾಟ ಮಾಡಲು ಇರೋ ಶಕ್ತಿಯೇ ದೇವರು. ಈ ಹಿನ್ನೆಲೆಯಲ್ಲಿ ಇಂದು ವೈಕುಂಠ ಏಕಾದಶಿಯ ವಿಶೇಷ ಪೂಜೆ ಕೈಗೊಂಡಿದ್ದೇನೆ. ಆದಿ ರಂಗ, ಮಧ್ಯರಂಗ, ಅಂತ್ಯರಂಗನ ದರ್ಶನ ಪಡೆದು ಪುಣ್ಯಪ್ರಾಪ್ತಿ ಆಗುತ್ತದೆಂಬ ಮಾತಿದೆ. ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ಮೂರು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದೇವೆ. ದೇವರ ದರ್ಶನ ಪಡೆದು ಮತ್ತೆ ವಾಪಸ್ ಆಗುತ್ತೇವೆ ಎಂದರು.
Comments