ಸಮೀಕ್ಷೆ ಪ್ರಕಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಅಧಿಕಾರದ ಚುಕ್ಕಾಣಿ

ರಾಜ್ಯದ ಸದ್ಯದ ರಾಜಕೀಯ ಚಿತ್ರಣವನ್ನು ನೋಡಿದರೆ 2018ರ ಚುನಾವಣೆ ಬಳಿಕ ಸರ್ಕಾರ ರಚನೆ ಮಾಡುವಲ್ಲಿ ಜೆಡಿಎಸ್ ಮಹತ್ವದ ಪಾತ್ರವನ್ನು ವಹಿಸಲಿದೆ. ಸಮೀಕ್ಷೆಯಲ್ಲಿ ಹೇಳಿರುವುದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಪಕ್ಷಗಳಿಸಲಿದೆ ಎಂದು ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ.ವಿಧಾನಸಭೆ ಚುನಾವಣಗೆ ಜೆಡಿಎಸ್ ಪಕ್ಷ ಭರ್ಜರಿಯಾಗಿ ಪ್ರಚಾರ ಆರಂಭಿಸಿದೆ. ಪಕ್ಷದ ಹಿಡಿತ ಹೆಚ್ಚಾಗಿರುವ ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಪ್ರದೇಶದ ಕೇಂದ್ರಗಳನ್ನು ಕೇಂದ್ರೀಕರಿಸಿದೆ.
ರಾಜ್ಯದ 224 ಕ್ಷೇತ್ರಗಳಲ್ಲಿ ನಡೆಸಿದ ಸಮೀಕ್ಷೆ ಪ್ರಕಾರ ಜೆಡಿಎಸ್ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ. ಜೆಡಿಎಸ್ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಏರಲಿದ್ದೇವೆ ಎಂದು ಹೇಳುತ್ತಿದೆ. ಸಮೀಕ್ಷೆಗಳಲ್ಲಿ ಹೇಳಿದ್ದಕ್ಕೀಂತ ಹೆಚ್ಚು ಸ್ಥಾನ ದೊರೆಯಲಿದೆ. ಪಕ್ಷಕ್ಕೆ ಬಹುಮತ ಬಾರದಿದ್ದರೆ ಸರ್ಕಾರ ರಚನೆ ಮಾಡಲು ನಮ್ಮ ಬೆಂಬಲ ಅನಿವಾರ್ಯ ಎಂಬುದು ನಾಯಕರ ವಾದ.
ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ಜೆಡಿಎಸ್ ಹೆಚ್ಚು ಮತ ಪಡೆಯಲಿದೆ. ಇದರಿಂದ ಪಕ್ಷ ಕಿಂಗ್ ಮೇಕರ್ ಆಗಲಿದೆ. ಸರ್ಕಾರ ರಚನೆ ಮಾಡುವಾಗ ಪಕ್ಷವನ್ನು ಪರಿಗಣಿಸುವುದು.ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, 'ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ' ಎಂದು ಹೇಳಿದ್ದಾರೆ.
Comments