ಮಹದಾಯಿ ಹಾಗೂ ಮೇಕೆದಾಟು ವಿವಾದದ ರಣಕಹಳೆ ಮೊಳಗಿಸಿದ ಮುದ್ದಹನುಮೇಗೌಡ

ಜನರಿಗೆ ಕುಡಿಯುವ ನೀರು ಪೂರೈಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿ. ಕುಡಿಯುವ ನೀರಿಗಾಗಿ ಉತ್ತರ ಕರ್ನಾಟಕ ಜನರು ಪ್ರತಿಭಟನೆಗಳ ಮೇಲೆ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕೆಂದು ಸಂಸದ ಅವರು ಲೋಕಸಭೆಯಲ್ಲಿ ಪ್ರಸ್ತಾಪಿಸಿದರು.
ಇಂದು ಲೋಕಸಭಾ ಕಲಾಪದಲ್ಲಿ ತುಮಕೂರು ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ ಅವರು ಮಹದಾಯಿ ಹಾಗೂ ಮೇಕೆದಾಟು ವಿಚಾರವನ್ನು ಪ್ರಸ್ತಾಪಿಸಿದರು. ದಕ್ಷಿಣ ಕರ್ನಾಟಕ ಭಾಗದಲ್ಲಿ ಮೇಕೆದಾಟು ಯೋಜನೆಯ ಜಾರಿ ಅಗತ್ಯವಾಗಿದೆ. ಹಾಗಾಗಿ ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯವನ್ನು ಬಿಟ್ಟು ಮಹದಾಯಿ ಮತ್ತು ಮೇಕೆದಾಟು ಎರಡೂ ಯೋಜನೆಗಳ ಜಾರಿಗೆ ಪ್ರಧಾನಿ ಮಧ್ಯಪ್ರವೇಶ ಅಗತ್ಯ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಅನಂತ್ ಕುಮಾರ್ ಹೆಗಡೆ, ಮಹದಾಯಿಗೆ ಸಂಬಂಧಿಸಿದಂತೆ ಗೋವಾ ಸಿಎಂ ಮನೋಹರ್ ಪರ್ರೀಕರ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು, ಅದರಂತೆ ಕರ್ನಾಟಕಕ್ಕೆ 7.35ಟಿಎಂಸಿ ನೀರು ಕೊಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು. ಬಳಿಕ ಆಡಳಿತ ಮತ್ತು ಪ್ರತಿಪಕ್ಷದ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು.
Comments