ಬಿಟಿಎಂ ಲೇಔಟ್ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ಅಭ್ಯರ್ಥಿ ಬಹುತೇಕ ಖಚಿತ

ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿ ಸದಸ್ಯರಾದ ಕೆ.ದೇವದಾಸ್ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್‍ಗಾಗಿ ಹೆಚ್ಚಿನ ಮಂದಿ ಆಕಾಂಕ್ಷಿಗಳು ಸದ್ಯಕ್ಕೆ ಕಂಡು ಬರುತ್ತಿಲ್ಲ.
ದೇವದಾಸ್ ಅವರಿಗೆ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗಿದೆ. ಇದಲ್ಲದೆ ಇನ್ನೂ ಕೆಲವು ಕ್ಷೇತ್ರಗಳಲ್ಲಿ ಬಿಬಿಎಂಪಿ ಸದಸ್ಯರು ಜೆಡಿಎಸ್ ಟಿಕೆಟ್ ಬಯಸುತ್ತಿದ್ದು, ಅವರಿನ್ನೂ ಟಿಕೆಟ್ ಕೋರಿ ಜೆಡಿಎಸ್‍ಗೆ ಅರ್ಜಿ ಸಲ್ಲಿಸಿಲ್ಲ. ಸಂಕ್ರಾಂತಿ ನಂತರ ಜೆಡಿಎಸ್‍ನ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿದ್ದು, ಆ ಸಂದರ್ಭದಲ್ಲಿ ಬೆಂಗಳೂರಿನ ಬಹಳಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ.ಪ್ರತಿ ವಿಧಾನಸಭಾ ಕ್ಷೇತ್ರವಾರು ಟಿಕೆಟ್ ಆಕಾಂಕ್ಷಿಗಳ ಹಾಗೂ ಪಕ್ಷದ ಮುಖಂಡರ ಸಭೆ ನಡೆಸಿದ ಕುಮಾರಸ್ವಾಮಿ ಅವರು ಈಗಾಗಲೇ ಬಹುತೇಕ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿದ್ದು, ಪ್ರಕಟಣೆ ಮಾತ್ರ ಬಾಕಿ ಉಳಿದಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
Comments