ಅನಂತಕುಮಾರ್ ಹೆಗಡೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅಣ್ಣ ಹಜಾರೆ

ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಮಾನಸಿಕ ರೋಗಿಗಳ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದು ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಣ್ಣ ಹಜಾರೆ ಅವರು, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಭಾರತದ ವ್ಯವಸ್ಥೆ ನಿಂತಿರುವುದೇ ಸಂವಿಧಾನದ ಆಶಯಗಳ ಮೇಲೆ. ಸಂವಿಧಾನಕ್ಕೆ ಅನುಗುಣವಾಗಿಯೇ ಎಲ್ಲ ಸರ್ಕಾರಗಳು ನಡೆಯುತ್ತಿರುವುದು. ಹಾಗಾಗಿ, ಅದನ್ನು ಬದಲಿಸುವ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿದ ಅಣ್ಣಾ ಹಜಾರೆ ಅವರು, 500 ಹಾಗೂ 1000 ರುಪಾಯಿ ನೋಟುಗಳನ್ನು ರದ್ದು ಮಾಡಿದ್ದರಿಂದ ದೇಶದಲ್ಲಿ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಭ್ರಷ್ಟಾಚಾರ ಮುಕ್ತ ದೇಶ ನಿರ್ಮಾಣ ಮಾಡುವಲ್ಲಿ ಮೋದಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.
Comments