`ಪವರ್’ಫುಲ್ ಸಚಿವರು ಸೈಲೆಂಟ್ ಆಗಿರೋದೇಕೆ ?
ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಚನ್ನಪಟ್ಟಣದ ಶಾಸಕ ಸಿ.ಪಿ.ಯೋಗೇಶ್ವರ್ ತಿರುಗಿಬಿದ್ದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸ್ತಿದ್ದಾರೆ. ಆದ್ರೆ ಪವರ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ. ಯಾಕಂದ್ರೆ ಡಿಕೆ ಶಿವಕುಮಾರ್ ನಂಬಿರುವ ನೊಣವನಕೆರೆಯ ಕಾಡು ಸಿದ್ದೇಶ್ವರ ಮಠದ ಅಜ್ಜಯ್ಯ ಜನವರಿ ಅಂತ್ಯದವರೆಗೆ ಸುಮ್ಮನಿರುವಂತೆ ಹೇಳಿದ್ದಾರಂತೆ.
ಇನ್ನು ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಘೋಷಣೆಯ ಮುನ್ನವೇ ಚುನಾವಣಾ ಕಣ ರಂಗೇರಿದೆ. ಸಿಎಂ ಸಾಧನ ಸಮಾವೇಶದ ನಂತರ ಹಠಕ್ಕೆ ಬಿದ್ದಿರೋ ಶಾಸಕ ಯೋಗೇಶ್ವರ್, ಕ್ಷೇತ್ರದಲ್ಲಿ ಠಿಕಾಣಿ ಹೂಡಿ ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಮಾಡ್ತಿದ್ದಾರೆ. ಜೊತೆಗೆ ಕಾರ್ಯಕರ್ತರ ಸಭೆ ನಡೆಸುತ್ತಿರುವ ಯೋಗೇಶ್ವರ್ ಭರ್ಜರಿ ಬಾಡೂಟ ಹಾಕಿಸ್ತಿದ್ದಾರೆ. ಇನ್ನು ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಘೋಷಣೆಯ ಮುನ್ನವೇ ಚುನಾವಣಾ ಕಣ ರಂಗೇರಿದೆ. ಸಿಎಂ ಸಾಧನ ಸಮಾವೇಶದ ನಂತರ ಹಠಕ್ಕೆ ಬಿದ್ದಿರೋ ಶಾಸಕ ಯೋಗೇಶ್ವರ್, ಕ್ಷೇತ್ರದಲ್ಲಿ ಠಿಕಾಣಿ ಹೂಡಿ ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಮಾಡ್ತಿದ್ದಾರೆ. ಜೊತೆಗೆ ಕಾರ್ಯಕರ್ತರ ಸಭೆ ನಡೆಸುತ್ತಿರುವ ಯೋಗೇಶ್ವರ್ ಭರ್ಜರಿ ಬಾಡೂಟ ಹಾಕಿಸ್ತಿದ್ದಾರೆ.
Comments