ಬಿಜೆಪಿಯ ಮಾಜಿ ಸಚಿವನ ಚಿತ್ತ ಜೆಡಿಎಸ್ ನತ್ತ
ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಜೆಡಿಎಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ. ಕಾರವಾರ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಆನಂದ್ ಆಸ್ನೋಟಿಕರ್ ರಾಜಕೀಯದಿಂದ ದೂರ ಉಳಿದಿದ್ದರು. ಇದೀಗ ಜೆಡಿಎಸ್ ಸೇರ್ಪಡೆ ಕುರಿತು ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಉತ್ತರ ಕರ್ನಾಟಕ ಪ್ರವಾಸದಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಮೈಸೂರಿಗೆ ಭೇಟಿ ನೀಡಲಿದ್ದು, ಕಲಾಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ಸಾಹಿತಿಗಳು, ಚಿಂತಕರ ಜತೆ ಸಂವಾದ ನಡೆಸಲಿದ್ದಾರೆ. ಜೆಡಿಎಸ್ ಪ್ರಣಾಳಿಕೆ ಕುರಿತು ಸಲಹೆ-ಸೂಚನೆ ಪಡೆಯಲಿದ್ದಾರೆ.
Comments