ಸಿಎಂ ಗಳ ನಡುವೆ ಟ್ವಿಟ್ಟರ್ ವಾರ್

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು ಬೆಂಗಳೂರಿಗೆ ಭೇಟಿ ನೀಡಿದ ಬೆನ್ನಲ್ಲೇ, ಯೋಗಿ ಆದಿತ್ಯನಾಥ್ ಅವರನ್ನು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ್ಸು ಎಚ್ಚೆತ್ತುಕೊಂಡು, ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರತಿ ಟ್ವೀಟ್ ದಾಳಿ ಮಾಡಿದರು
ವಿಜಯನಗರದ ಎಂ.ಸಿ. ಲೇಔಟ್ ನಲ್ಲಿರುವ ಬಿಜಿಎಸ್ ಮೈದಾನದಲ್ಲಿ ಭಾನುವಾರದಂದು ಬಿಜೆಪಿ ಹಮ್ಮಿಕೊಂಡಿದ್ದ ಕರ್ನಾಟಕ ಪರಿವರ್ತನಾ ಯಾತ್ರೆ ಯಶಸ್ವಿಯಾಗಿದ್ದು, ಬಿಜೆಪಿ ನಾಯಕರ ಉತ್ಸಾಹ ಹೆಚ್ಚಿಸಿದೆ. ಆದರೆ, ಬಿಜೆಪಿ ನಾಯಕರ ಉತ್ಸಾಹಕ್ಕೆ ಭಂಗ ಬರುವಂತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ಟರ್ ಮೂಲಕ ಕೆಣಕಿದ್ದಾರೆ.
Comments