ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ

ಕಾಟಿಪಳ್ಳ ದೀಪಕ್ ರಾವ್ ಹತ್ಯೆಯಲ್ಲಿ ಮಂಗಳೂರಿನ ಬಿಜೆಪಿ ಕಾರ್ಪೊರೇಟರ್ ಒಬ್ಬರ ಕೈವಾಡ ಇದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿ ಬಳಿ ಆ ಬಗ್ಗೆ ಯಾವುದೇ ದಾಖಲೆಗಳಿದ್ದರೆ ನೀಡಲಿ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಹ್ಮಾವರದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಈ ರೀತಿ ಉತ್ತರಿಸಿದರು. ದೀಪಕ್ ರಾವ್ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಕುಮಾರಸ್ವಾಮಿ ಬಳಿ ಯಾವುದೇ ದಾಖಲೆಗಳಿದ್ದರೆ ಅದನ್ನು ಕೊಟ್ಟು ಕಳುಹಿಸಲಿ. ಅದನ್ನು ಸೇರಿಸಿ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Comments