ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಅಮಿತ್ ಶಾಗೆ ಭಯ : ಪ್ರಜ್ವಲ್ ರೇವಣ್ಣ

ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳುವುದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಯ ಪಡುತ್ತಿದ್ದಾರೆ ಎಂದು ಜೆಡಿಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕದಲ್ಲಿರುವ ಸುವರ್ಣಸೌಧಕ್ಕೆ ಸರಕಾರಿ ಪ್ರಮುಖ ಕಚೇರಿ ಸ್ಥಳಾಂತರಿಸಲಾಗುವುದು ಎಂದ ಪ್ರಜ್ವಲ್, ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚುಟುವಟಿಕೆ ನಡೆಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಬೆಳಗಾವಿ ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಜೆಡಿಎಸ್ ಗೆ ಬಂದರೆ ಪಕ್ಷಕ್ಕೆ ಆನೆ ಬಲ ಬಂದಂತಾಗುತ್ತದೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರ ಹಿಡಿಯುವುದು ಶತ ಸಿದ್ಧ. ಇನ್ನು ಮುಂಬರುವ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಜೆಡಿಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಹೇಳಿದರು.
Comments