ಜೆಡಿಎಸ್ ಅಭ್ಯರ್ಥಿಯಿಂದ ಶಿವಮೊಗ್ಗ ರಾಜಕೀಯದಲ್ಲಿ ಹೊಸ ಹುರುಪು
ತೀರ್ಥಹಳ್ಳಿ ತಾಲೂಕಿನ ರಾಜಕೀಯ ಚಿತ್ರಣ ಬದಲಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಜೆಡಿಎಸ್ ಸೇರುವುದಾಗಿ ಘೋಷಿಸಿದ್ದಾರೆ. ಇದರಿಂದಾಗಿ ಕ್ಷೇತ್ರದ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಆರಂಭವಾಗಿದೆ. ಮಂಜುನಾಥ ಗೌಡರ ಬೆಂಬಲಿಗರು ಸಭೆ ನಡೆಸಿ ಜೆಡಿಎಸ್ ಪಕ್ಷ ಸೇರುವುದಾಗಿ ಘೋಷಣೆ ಮಾಡಿದ್ದಾರೆ.
2013ರ ಚುನಾವಣೆ ಬಳಿಕ ಕಾಂಗ್ರೆಸ್ ಸೇರಿದ್ದ ಮಂಜುನಾಥ ಗೌಡರು, ಕೆಲವು ದಿನಗಳಿಂದ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು.ಈಗ ಜೆಡಿಎಸ್ ಸೇರುವುದಾಗಿ ಘೋಷಿಸಿದ್ದಾರೆ. ಇದರಿಂದಾಗಿ ಕ್ಷೇತ್ರದ ರಾಜಕೀಯದಲ್ಲಿ ಹೊಸ ಸಂಚಲನ ಉಂಟಾಗಿದೆ. ಬೆಂಬಲಿಗರ ಸಭೆ ನಡೆಸಿದ ಆರ್.ಎಂ.ಮಂಜುನಾಥ ಗೌಡರು, ‘ರಾಷ್ಟ್ರೀಯ ಪಕ್ಷಗಳಿಂದ ಜನರಿಗೆ ಉಳಿಗಾಲವಿಲ್ಲ. ಆದ್ದರಿಂದ, ರಾಜ್ಯದಲ್ಲಿ ಜನಪರವಾಗಿರುವ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಸೇರುತ್ತೇನೆ. ಈಗ ಆಟ ಶುರು..ಅಂತ್ಯವಲ್ಲ' ಎಂದು ಹೇಳಿದ್ದಾರೆ.ಕ್ಷೇತ್ರದ ಜನರು ಎರಡೂ ಪಕ್ಷಗಳ ಅಧಿಕಾರ ನೋಡಿದ್ದೀರಿ. ದೇವೇಗೌಡರ ಮಾರ್ಗದರ್ಶನದಲ್ಲಿ ಕುಮಾರಸ್ವಾಮಿ ನನಗೆ ಆಹ್ವಾನ ಕೊಟ್ಟಿದ್ದಾರೆ. ನನಗೆ ಎಲ್ಲಾ ಪಕ್ಷದಲ್ಲೂ ಸ್ನೇಹಿತರಿದ್ದಾರೆ. ಅನೇಕರು ಜೆಡಿಎಸ್ ಸೇರಲು ಸಿದ್ಧವಾಗಿದ್ದಾರೆ' ಎಂದು ಹೇಳುವ ಮೂಲಕ ಹೊಸ ಲೆಕ್ಕಾಚಾರ ಹುಟ್ಟುಹಾಕಿದ್ದಾರೆ.
Comments