ಜೆಡಿಎಸ್ ಅಭ್ಯರ್ಥಿಗಳ ಪರ ತೆಲುಗು ಸ್ಟಾರ್ ಚಿತ್ರನಟ ಪ್ರಚಾರ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ಚಿತ್ರನಟ ಪವನ್‌ಕಲ್ಯಾಣ್ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಬೆಂಗಳೂರು ನಗರ, ಗ್ರಾಮಾಂತರ ಭಾಗದಲ್ಲಿ ತೆಲುಗು ಭಾಷಿಕರು ಅದರಲ್ಲೂ ಪವನ್‌ಕಲ್ಯಾಣ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಅವರ ಮತ ಜೆಡಿಎಸ್‌ನತ್ತ ಸೆಳೆಯಲು ಪವನ್‌ಕಲ್ಯಾಣ್ ರನ್ನು ಪ್ರಚಾರಕ್ಕೆ ಕರೆತರಲು ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ.
ಈಗಾಗಲೇ ಪವನ್‌ಕಲ್ಯಾಣ್ ಜತೆ ಈ ಬಗ್ಗೆ ಕುಮಾರಸ್ವಾಮಿ ಮಾತುಕತೆ ಸಹ ನಡೆಸಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಜನಸೇನಾ ಸಂಘಟನೆ ಸ್ಥಾಪಿಸಿ ಅದರ ಮೂಲಕವೇ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿರುವ ಪವನ್ ಕಲ್ಯಾಣ್ ಕರ್ನಾಟಕದಲ್ಲಿ ಜೆಡಿಎಸ್‌ಗೆ ಬೆಂಬಲ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಇದೀಗ ತೆಲುಗು ಚಿತ್ರನಟ ಪವನ್‌ಕಲ್ಯಾಣ್ ಚಿತ್ರನಟರನ್ನು ಸ್ಟಾರ್ ಪ್ರಚಾರಕರಾಗಿ ಬಳಸಿಕೊಳ್ಳಲು ಜೆಡಿಎಸ್ ಮುಂದಾಗಿದೆ.ಈ ಮಧ್ಯೆ, ಕರ್ನಾಟಕ ಹಾಗೂ ಆಂಧ್ರ ಸೇರಿ ದೇಶಾದ್ಯಂತ ಬುಧವಾರ ಬಿಡುಗಡೆಯಾದ ಪವನ್‌ಕಲ್ಯಾಣ್ ಅಭಿನಯದ "ಅಜ್ಞಾತವಾಸಿ' ಚಿತ್ರ ಯಶಸ್ವಿಯಾಗಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.
ಪವನ್‌ಕಲ್ಯಾಣ್ ಜೆಡಿಎಸ್ ಪರ ಪ್ರಚಾರಕ್ಕೆ ಬರುವ ಬಗ್ಗೆ ಪ್ರತಿಕ್ರಿಯಿಸಿರುವ ಎಚ್.ಡಿ.ಕುಮಾರಸ್ವಾಮಿ, ಆ ಬಗ್ಗೆ ಮಾತುಕತೆ ನಡೆಸಲಾಗಿದೆ. ಚುನಾವಣೆಯಲ್ಲಿ ಅವರೂ ಸೇರಿದಂತೆ ಹಲವಾರು ನಟರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.
Comments