ಕಾರವಾರ- ಅಂಕೋಲಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಲು ತಂತ್ರ

ಬೆಂಗಳೂರಿನಲ್ಲಿ ಜನವರಿ 15ರಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರಲಿದ್ದಾರೆ' ಎಂದು ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪುರುಷೋತ್ತಮ ಸಾವಂತ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, 'ವಸಂತ್ ಅಸ್ನೋಟಿಕರ್ ಅವರು ಮೊದಲ ಬಾರಿಗೆ ಶಾಸಕರಾಗಿದ್ದು ಕೆಸಿಪಿಯಿಂದ. ಆದ್ದರಿಂದ ಅವರ ಪುತ್ರ ಆನಂದ ಅವರನ್ನು ಜೆಡಿಎಸ್ ಗೆ ಕರೆತರಲು ಮಧು ಬಂಗಾರಪ್ಪ ಪ್ರಯತ್ನ ನಡೆಸಿದ್ದರು. ಅದು ಫಲಿಸಿದೆ' ಎಂದರು. ಮುಂಬರುವ ಚುನಾವಣೆಯಲ್ಲಿ ಆನಂದ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ನಿಲ್ಲುವ ಮೂಲಕ ಕಾರವಾರ- ಅಂಕೋಲಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ. ಆನಂದ್ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ರಾಜ್ಯದಲ್ಲಿಯೂ ಜೆಡಿಎಸ್ ಅಧಿಕಾರಕ್ಕೆ ಬರಲಿದೆ' ಎಂದು ತಿಳಿಸಿದರು.
Comments