ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ

ರಾಜ್ಯದ ನೆಲ, ಜಲ, ಭಾಷೆ ರಕ್ಷಣೆಗೆ ಪ್ರಾದೇಶಿಕ ಪಕ್ಷದ ಅಗತ್ಯವಿದೆ ಎಂದು ಜೆಡಿಎಸ್‌ನ ಯುವ ಘಟಕ ರಾಜಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
ನಗರದ ಜೆಡಿಎಸ್ ಜಿಲ್ಲಾ ಯುವ ಘಟಕದಿಂದ ಆಯೊಜಿಸಿದ್ದ 'ಕರ್ನಾಟಕಕ್ಕೆ ಕುಮಾರಣ್ಣ' ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೆರೆಯ ರಾಜ್ಯಗಳಲ್ಲಿ ಪ್ರಾದೇಶಿ ಪಕ್ಷಗಳ ಅಧಿಕಾರವಿರುವುದರಿಂದ ಹೆಚ್ಚಿನ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತಿದೆ. ರಾಷ್ಟ್ರಿಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿಯಾಗಲಿ, ಭಾಷೆ, ನೆಲ, ಜಲ ಸಂರಕ್ಷಣೆ ಮಾಡಲು ಸಾಧ್ಯವಿಲ್ಲ ಎಂದರು.
ಬಂಗಾರಪ್ಪನವರ ಜನಪರ ಯೊಜನೆಗಳನ್ನು ಜಾರಿಗೆ ತರುವ ಸಾಮರ್ಥ್ಯ ಪ್ರಾದೇಶಿಕ ಪಕ್ಷ ಜೆಡಿಎಸ್‌ನಿಂದ ಮಾತ್ರ ಸಾಧ್ಯ. ಜೆಡಿಎಸ್ ಅಪ್ಪ-ಮಕ್ಕಳ ಪಕ್ಷವೆಂದು ಹೇಳುವ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ ಮಧು ತನ್ನ ತಂದೆಯವರು ಸ್ವರ್ಗವಾಸಿಯಾದ ನಂತರ ನನಗೆ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡಿ ವಿಧಾನಸಭಾ ಮೆಟ್ಟಿಲು ಹತ್ತಿಸಿದವರು ದೇವೇಗೌಡರು ಮತ್ತು ಹೆಚ್.ಡಿ. ಕುಮಾರಸ್ವಾಮಿ ಎಂದರು. ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಅಧ್ಯಕ್ಷ ರಮೇಶಗೌಡ, ಮಹಾಪ್ರಧಾನ ಕಾರ್ಯದರ್ಶಿ ಹರೀಶ, ನರಸಿಂಹಮೂರ್ತಿ, ದಾನಪ್ಪ, ಸುದರ್ಶನ, ರಾಜಶೇಖರ ಜವಳಿ, ಸೇರಿದಂತೆ ಇತರರರು ಉಪಸ್ಥಿತರಿದ್ದರು.
Comments