ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜೆಡಿಎಸ್ ಅಭ್ಯರ್ಥಿ ಯಾರು ಗೊತ್ತಾ?
ಜಾತ್ಯಾತೀತ ಜನತಾದಳದ ಹಿರಿಯ ನಾಯಕ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದೀಗ ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.ಸದ್ಯಕ್ಕೆ ಈ ಕ್ಷೇತ್ರವನ್ನು ಕಾಂಗ್ರೆಸ್‍ನ ಆರ್.ವಿ.ದೇವರಾಜ್ ಅವರು ಪ್ರತಿನಿಧಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಸಿಂಧ್ಯಾ ವರ್ಸಸ್ ದೇವರಾಜ್ ನಡುವೆ ಫೈಟ್ ನಡೆಯಲಿದೆ. ಈ ಮಧ್ಯೆ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಮಾತನಾಡಿದ ಪಿ.ಜಿ.ಆರ್.ಸಿಂಧ್ಯಾ, ಪಕ್ಷದ ನಾಯಕರು ಏನು ಹೇಳುತ್ತಾರೋ ಹಾಗೆ ಕೇಳುತ್ತೇನೆ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.
ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರ ದೋಷಾರೋಪ ಮಾಡುವುದರಲ್ಲೇ ಕಾಲಹರಣ ಮಾಡುತ್ತಿವೆ. ಇದರಿಂದಾಗಿ ರಾಜ್ಯದ ಜನ ಬೇಸತ್ತಿದ್ದಾರೆ. ಇದೇ ಕಾರಣಕ್ಕಾಗಿ ಅವರು ದೇವೇಗೌಡರ ನೇತೃತ್ವದ ಜೆಡಿಎಸ್ ಕಡೆ ನೋಡುತ್ತಿದ್ದು, ಈ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ಭಾವಿಸಿದ್ದಾರೆ ಎಂದರು.ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಮೂರು ಲಕ್ಷ ಕೋಟಿ ರೂ. ಹಣಕ್ಕೆ ಲೆಕ್ಕ ಕೊಡಿ ಎಂದು ರಾಜ್ಯ ಸರ್ಕಾರವನ್ನು ಕೇಳುತ್ತಿದ್ದಾರೆ. ಆದರೆ ಲೆಕ್ಕ ಕೇಳಲು ಅವರ್ಯಾರು ಎಂದು ಪ್ರಶ್ನಿಸಿದರು.ಕೇಂದ್ರ ಸರ್ಕಾರ ಯಾವ್ಯಾವ ಬಾಬ್ತಿನಲ್ಲಿ ಎಷ್ಟೆಷ್ಟು ಹಣ ಬಿಡುಗಡೆ ಮಾಡಿದೆ? ಅದರಲ್ಲಿ ಎಲ್ಲಿ ದುರುಪಯೋಗವಾಗಿದೆ ಎಂಬುದನ್ನು ಗುರುತಿಸಿ ಹೇಳುವ ಕೆಲಸವಾಗಬೇಕೇ ಹೊರತು ವಿನಾಕಾರಣ ಆರೋಪ ಮಾಡುವುದಲ್ಲ ಎಂದು ನುಡಿದರು.
Comments