ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಕುಮಾರಣ್ಣ

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ಬಿ.ಮುನೇಗೌಡ 2018ರ ಚುನಾವಣೆ ಅಭ್ಯರ್ಥಿಯಾಗಿದ್ದಾರೆ.
ಕಳೆದ ಚುನಾವಣೆಯಲ್ಲಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ದೇವನಹಳ್ಳಿಯ ಚಪ್ಪರದಕಲ್ಲಿನ ಬಳಿ ಆಯೋಜಿಸಲಾಗಿದ್ದ ಸಮಾವೇಶ ಉದ್ದೇಶಿಸಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ಅಭ್ಯರ್ಥಿ ಘೋಷಣೆ ಮಾಡಿದರು.ಈ ಮೂಲಕ ಕ್ಷೇತ್ರದಲ್ಲಿ ಚುನಾವಣೆಯ ಕಾವನ್ನು ಹೆಚ್ಚಿಸಿದ್ದಾರೆ.ಮೂರು ವರ್ಷಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಕೊಡುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಅದು ಕೇವಲ ಹೇಳಿಕೆಯಾಗೇ ಉಳಿದಿದೆ' ಎಂದು ಕುಮಾರಸ್ವಾಮಿ ಟೀಕಿಸಿದರು.ದೊಡ್ಡ ಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಮುನೇಗೌಡ ಅವರಿಗೆ ಟಿಕೆಟ್ ನೀಡಲಾಗುತ್ತದೆ. ಅವರನ್ನು ಗೆಲ್ಲಿಸುವ ಹೊಣೆ ನಿಮ್ಮದು' ಎಂದು ಎಚ್.ಡಿ.ಕುಮಾರಸ್ವಾಮಿ ಸಮಾವೇದಲ್ಲಿ ಹೇಳಿದರು.
Comments