ಪ್ರಧಾನಿ ವಿರುದ್ಧ ಚಾರ್ಜ್‍ಶೀಟ್ ಬಿಡುಗಡೆ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ

ಪ್ರಧಾನಿಯವರು ದೆಹಲಿಯಿಂದ ಬಂದು ನಮ್ಮ ವಿರುದ್ಧ ಚಾರ್ಜ್‍ಶೀಟ್ ಬಿಡುಗಡೆ ಮಾಡುವ ಮುನ್ನ ನಾವೇ ಬಿಜೆಪಿ ಹಾಗೂ ಪ್ರಧಾನಿ ವಿರುದ್ಧ ಚಾರ್ಜ್‍ಶೀಟ್ ಬಿಡುಗಡೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಕುಟುಕಿದರು. ಪ್ರಧಾನಿ ದೆಹಲಿಯಿಂದ ಬಂದು ಕಾಂಗ್ರೆಸ್ ಹಾಗೂ ನಿಮ್ಮ ವಿರುದ್ಧ ಚಾರ್ಜ್‍ಶೀಟ್ ಬಿಡುಗಡೆ ಮಾಡುತ್ತಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಈ ಮೇಲಿನಂತೆ ಪ್ರತಿಕ್ರಿಯಿಸಿದರು.
ರಾಮಕೃಷ್ಣ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಕಾರಣ ನಮ್ಮ ಮೇಲೆ ಆರೋಪ ಮಾಡಲಾಗುತ್ತಿದೆ ಎಂದರು. ಮುಂದಿನ ಬಾರಿಯೂ ಅಧಿಕಾರಕ್ಕೆ: ನಾವು ಆಡಳಿತಾವಧಿಯಲ್ಲಿ ಕೈಗೊಂಡಿರುವ ಯೋಜನೆಗಳಿಂದ ರಾಜ್ಯದ ಕಟ್ಟ ಕಡೆಯ ವ್ಯಕ್ತಿಗೂ ಉಪಯೋಗವಾಗಿದೆ. ಈ ಯೋಜನೆಗಳು ಅವರಿಗೆ ತಲುಪಿವೆ. ಹಾಗಾಗಿ ಜನತೆ ನಮ್ಮನ್ನು ಮುಂದಿನ ಬಾರಿಯೂ ಆರಿಸಲಿದ್ದಾರೆ ಎಂದರು. ರಾಜ್ಯಾದ್ಯಂತ ನಮ್ಮ ನಿರೀಕ್ಷೆಗೂ ಮೀರಿ ಜನರ ಬೆಂಬಲವಿದೆ ಎಂಬುದು ನಾನು ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಮನವರಿಕೆಯಾಗಿದೆ. ನಾವು ಮಾಡಿರುವ ಎಲ್ಲ ರೀತಿಯ ಯೋಜನೆಗಳಿಂದ ಜನತೆಗೆ ಅನುಕೂಲವಾಗಿದೆ. ಹಾಗಾಗಿ ಮುಂದಿನ ಬಾರಿಯೂ ಜನ ನಮ್ಮನ್ನು ಆರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Comments