ದೇಶದ ನ್ಯಾಯಾಂಗ ವ್ಯವಸ್ಥೆ ಹಾಳಾಗುವ ಮುನ್ನ ಕ್ರಮ ಕೈಗೊಳ್ಳಿ : ಎಚ್ ಡಿಕೆ ಆಗ್ರಹ

ನಗರದ ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ವಿದ್ಯಾಭವನದಲ್ಲಿ ಒಮ್ಮೆ ಹೈಕೋರ್ಟ್ ನ್ಯಾಯಾಧೀಶರೊಬ್ಬರು 'ಈ ವ್ಯವಸ್ಥೆ ಹಾಳಾಗುವ ಮುನ್ನ ಕ್ರಮ ಕೈಗೊಳ್ಳಿ, ನ್ಯಾಯಾಲಯಗಳ ತೀರ್ಪನ್ನು ಕೊಂಡುಕೊಳ್ಳುವ ವ್ಯವಸ್ಥೆ ಆರಂಭವಾಗಿದೆ' ಎಂದಿದ್ದನ್ನು ಕುಮಾರಸ್ವಾಮಿ ಉಲ್ಲೇಖಿಸಿದರು.
ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಡೆಯಬಾರದ ಘಟನೆ ನಡೆದಿದೆ. ಶತಮಾನಗಳಿಂದ ನ್ಯಾಯಾಂಗದ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗೆ ಆಸ್ಪದ ಇರಲಿಲ್ಲ. ರಾಜಕೀಯ ಪಕ್ಷಗಳು, ಅಧಿಕಾರಿಗಳ ವಿಚಾರದಲ್ಲಿ ನಡೆಯುತ್ತಿದ್ದ ಘರ್ಷಣೆ ಈಗ ನ್ಯಾಯಾಂಗ ವ್ಯವಸ್ಥೆಯಲ್ಲಿ ಆಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ನ ನ್ಯಾಯಾಧೀಶರು ಮಾಧ್ಯಮದ ಮುಂದೆ ಬಂದಿದ್ದಾರೆ. ಮುಖ್ಯ ನ್ಯಾಯಾಧೀಶರಿಗೆ ಬರೆದ ಪತ್ರವನ್ನು ಬಹಿರಂಗ ಮಾಡಿದ್ದಾರೆ. ತಕ್ಷಣ ಕೇಂದ್ರ ಸರಕಾರ ಅಥವಾ ರಾಷ್ಟ್ರಪತಿಗಳು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದರೆ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನ ನಂಬಿಕೆಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
Comments