ಜನವರಿ 27ರಿಂದ ರಾಹುಲ್ ರಾಜ್ಯ ಪ್ರವಾಸ

ರಾಜ್ಯ ವಿಧಾನಸಬಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಭರದ ಸಿದ್ಧತೆ ಹಾಗೂ ರಣತಂತ್ರದ ರೂಪರೇಷೆ ಸಿದ್ಧಪಡಿಸುವುದು, ರಾಹುಲ್ ಗಾಂಧಿಯವರ ರಾಜ್ಯ ಪ್ರವಾಸ ಮತ್ತಿತರ ವಿಷಯಗಳ ಕುರಿತು ಹೈಕಮಾಂಡ್ ಜತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಯ್ಯ ಸೇರಿದಂತೆ ರಾಜ್ಯದ ಮುಖಂಡರು ದೆಹಲಿಗೆ ತಲುಪಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಲ್ಲಿ ಸಭೆಯನ್ನು ಆಯೋಜಿಸಿದ್ದು, ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ. ಅದ್ಯಕ್ಷ ಡಾ.ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷರಾದ ಎಸ್.ಆರ್. ಪಾಟೀಲ್, ದಿನೇಶ್ ಗುಂಡೂರಾವ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ವೀರಪ್ಪ ಮೊಯ್ಲಿ, ಹಿರಿಯ ಮುಖಂಡರಾದ ಮುಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್. ಆಸ್ಕರ್ ಫರ್ನಾಂಡೀನ್ ಅವರನ್ನು ಆಹ್ವಾನಿಸಿದ್ದಾರೆ. ಸಭೆಯಲ್ಲಿ ಮುಖ್ಯವಾಗಿ ರಾಜ್ಯದ ರಾಜಕೀಯ ಪರಿಸ್ಥಿತಿ, ಕಾಂಗ್ರೆಸ್ ಪಕ್ಷದಲ್ಲಿರುವ ಆಂತರಿಕ ಕಲಹ, ಮಹಾದಾಯಿ, ಲಿಂಗಾಯತ ಪ್ರತ್ಯೇಕ ಧರ್ಮ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕಾಂಗ್ರೆಸ್ ತಳೆದಿರುವ ನಿಲುವಿನ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೆ. ರಾಜ್ಯ ಹಾಲಿ ಕಾಂಗ್ರೆಸ್ ಪಕ್ಷದ ಸ್ಥಿತಿ, ಹಾಲಿ ಶಾಸಕರು ಕ್ಷೇತ್ರದಲ್ಲಿ ಹೊಂದಿರುವ ವರ್ಚಸ್ಸು ಮತ್ತು ಗೆಲ್ಲಬಲ್ಲವರು, ಸೋಲುವ ಸಾಧ್ಯಯಿರುವ ಶಾಸಕರ ಬಗ್ಗೆ ಕೈಗೊಳ್ಳಬೇಕಾದ ನಿಲುವು ಸೇರಿದಂದೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ವಿಚಾರಗಳ ಬಗ್ಗೆ ಸಾದ್ಯಂತವಾಗಿ ಚರ್ಚೆ ನಡೆಯಲಿದೆ. ಇದಲ್ಲದೆ, ಜೆಡಿಎಸ್ ವಿರುದ್ಧ ಬಂಡಾಯ ಎದ್ದಿರುವ ಶಾಸಕರನ್ನು ಕಾಂಗ್ರೆಸ್'ಗೆ ಸೇರ್ಪಡೆಗೊಳಿಸಿಕೊಳ್ಳುವ ವಿಚಾರದ ಕುರಿತಂತೆಯೂ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
Comments