ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜೆಡಿಎಸ್ ಅಭ್ಯರ್ಥಿ ಯಾರು ಗೊತ್ತಾ?

ಪ್ರತಿಷ್ಠಿತ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗೇರತೊಡಗಿದೆ. ಚುನಾವಣಾ ದಿನಾಂಕ ಪ್ರಕಟ, ಅಭ್ಯರ್ಥಿಗಳ ಘೋಷಣೆಗೂ ಮುನ್ನವೇ ಪ್ರಮುಖ ಮೂರು ರಾಜಕೀಯ ಪಕ್ಷಗಳಲ್ಲೂ ಪ್ರಚಾರದ ಭರಾಟೆ ಜೋರಾಗಿದೆ. ಜೆಡಿಎಸ್ ತನ್ನ ಕ್ಷೇತ್ರ ಮರಳಿ ಪಡೆಯಲು ಕಸರತ್ತು ನಡೆಸುತ್ತಿರುವುದು ಕಂಡುಬರುತ್ತಿದೆ.
ಶಾಸಕ ಕೆ.ಗೋಪಾಲಯ್ಯ ಪ್ರತಿನಿಧಿಸುತ್ತಿರುವ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ನಡುವೆ ಪೈಪೋಟಿ ಇದ್ದಂತೆ ಕಂಡುಬರುತ್ತಿದೆ.ಒಕ್ಕಲಿಗರ ಪ್ರಾಬಲ್ಯ ಹೊಂದಿರುವ ಈ ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳೇ ನಿರ್ಣಾಯಕ. ಹೀಗಾಗಿ ಮೂರೂ ಪಕ್ಷಗಳು ಆ ವರ್ಗದ ಅಭ್ಯರ್ಥಿಗಳಿಗೇ ಮಣೆ ಹಾಕುವ ಬಗ್ಗೆ ಚಿಂತನೆ ನಡೆಸುತ್ತಿವೆ. ಹಾಲಿ ಶಾಸಕರಾಗಿರುವ ಗೋಪಾಲಯ್ಯ ಅವರೇ ಈ ಬಾರಿಯೂ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ.
ಗೋಪಾಲಯ್ಯ ಅವರು ಕ್ಷೇತ್ರಾದ್ಯಂತ ಮಿಂಚಿನಂತೆ ಸಂಚರಿಸುತ್ತಿದ್ದಾರೆ. ಮಾಜಿ ಉಪಮೇಯರ್, ಹಾಲಿ ಪಾಲಿಕೆ ಸದಸ್ಯರಾಗಿರುವ ತಮ್ಮ ಪತ್ನಿ ಹೇಮಲತಾ ಗೋಪಾಲಯ್ಯ ಅವರೊಂದಿಗೆ ಪ್ರತಿ ಮನೆಮನೆಗೂ ತೆರಳಿ ಅವರ ಕಷ್ಟ-ಸುಖಗಳಿಗೆ ಸ್ಪಂದಿಸಿ ಮತಗಳಿಕೆಯ ಹಾದಿಯಲ್ಲಿದ್ದಾರೆ.ಏಳು ವಾರ್ಡ್‍ಗಳನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ನಾಲ್ಕು ವಾರ್ಡ್‍ಗಳಲ್ಲಿ ಜೆಡಿಎಸ್ ಸದಸ್ಯರಿದ್ದಾರೆ. ಉಳಿದ ಎರಡು ವಾರ್ಡ್‍ಗಳಲ್ಲಿ ಕಾಂಗ್ರೆಸ್ ಹಾಗೂ ಕೇವಲ ಒಂದು ವಾರ್ಡ್‍ನಲ್ಲಿ ಬಿಜೆಪಿ ಸದಸ್ಯರಿದ್ದಾರೆ. ಹೀಗಾಗಿ ಜೆಡಿಎಸ್ ಪಕ್ಷದಲ್ಲಿ ಜೋಷ್ ಹೆಚ್ಚಾಗಿದೆ. ಒಟ್ಟಾರೆ ಜೆಡಿಎಸ್ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಉರುಪು ಕಂಡುಬರುತ್ತಿದೆ.
Comments