ಜೆಡಿಎಸ್ ಸೇರ್ಪಡೆಗೊಂಡ ಬಿಜೆಪಿಯ ಮಾಜಿ ಸಚಿವ…!!
ಬಿಜೆಪಿಯ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಬಿಜೆಪಿಗೆ ಗುಡ್ ಬೈ ಹೇಳಿರುವ ಅವರು ಜೆಡಿಎಸ್ ವರಿಷ್ಟ ಎಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಅಧಿಕಾರ ಕಳೆದುಕೊಂಡ ನಂತರ ರಾಜಕೀಯವಾಗಿ ಮರೆಗೆ ಸರಿದಿದ್ದ ಇವರು ಚುನಾವಣೆ ಅತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಬಿಜೆಪಿಯವರು ಸರಿಯಾಗಿ ಸ್ಪಂದಿಸದ ಕಾರಣಕ್ಕಾಗಿ ಅವರು ತಟಸ್ಥರಾಗಿದ್ದರು. ಮಧು ಬಂಗಾರಪ್ಪನವರ ಪರಿಶ್ರಮದಿಂದ ಜೆಡಿಎಸ್ಗೆ ಕರೆತರುವಲ್ಲಿ ಯಶಸ್ವಿಯಾಗಿದ್ದರು. ಸಂಕ್ರಾಂತಿಯ ಹಬ್ಬವಾದ ಇಂದು ಜೆಡಿಎಸ್ ವರಿಷ್ಟರಾದ ದೇವೇಗೌಡರ ಪದ್ಮನಾಭ ನಗರದ ಮನೆಯಲ್ಲಿ ಎಚ್.ಡಿ.ಕುಮಾರಸ್ವಾಮಿಯವರ ಸಮ್ಮುಖದಲ್ಲಿ ಜೆಡಿಎಸ್ ಸೇರಿದ್ದಾರೆ.ಆನಂದ್ ಅಸ್ನೋಟಿಕರ್ ಸೇರ್ಪಡೆಯಿಂದಾಗಿ ಉತ್ತರ ಕರ್ನಾಟಕದ ಕಾರವಾರ ಭಾಗದಲ್ಲಿ ಜೆಡಿಎಸ್ ಪ್ರಭಲವಾಗಲು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.
Comments