ಚಿತ್ರದುರ್ಗ ನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಪ್ರತ್ಯೋನ್ನತ ನಟನ ಅಳಿಯ ಕಣಕ್ಕೆ ...!!
ಚಿತ್ರದುರ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಕಾವು ನಿಧಾನವಾಗಿ ಏರುತ್ತಿದೆ. ನಟ ದೊಡ್ಡಣ್ಣ ಅಳಿಯ ಮತ್ತು ಉದ್ಯಮಿ ಕೆ.ಸಿ.ವೀರೇಂದ್ರ ಅವರು ಚಿತ್ರದುರ್ಗ ನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಕೆ.ಸಿ.ವೀರೇಂದ್ರ (ಪಪ್ಪಿ) ಅವರು ಮೂಲತಃ ಚಳ್ಳಕೆರೆಯವರು. ಆದರೆ, ಚಿತ್ರದುರ್ಗ ನಗರ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.
ಉದ್ಯಮಿಯಾಗಿದ್ದು ಹಲವು ಸಮಾಜಮುಖಿ ಕಾರ್ಯದಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಆದ್ದರಿಂದ, ಜಿಲ್ಲೆಯ ಜನಗರಿಗೆ ಅವರು ಚಿರಪರಿಚಿತರು.ಕೆ.ಸಿ.ವೀರೇಂದ್ರ ಅವರು ಚುನಾವಣೆ ಕಣಕ್ಕಿಳಿದರೆ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣಾ ತಂತ್ರ ಬದಲಾವಣೆ ಮಾಡಬೇಕಾಗಬಹುದು. ಕೆ.ಸಿ.ವೀರೇಂದ್ರ ಅವರು ಚಳ್ಳಕೆರೆ, ಹಿರಿಯೂರು ಹಾಗೂ ಹೊಸದುರ್ಗ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿದ್ದಾರೆ. ಆದ್ದರಿಂದ, ಜಿಲ್ಲೆಯಲ್ಲಿ ಪಕ್ಷದ ಬಲ ಹೆಚ್ಚಾಗಲಿದೆ. ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಸಹಕಾರಿಯಾಗಲಿದೆ ಎಂಬ ಲೆಕ್ಕಾಚಾರವಿದೆ.
Comments