ಸಿಂದಗಿ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಜೆಡಿಎಸ್ ಮಾಸ್ಟರ್ ಪ್ಲಾನ್

ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಪ್ರಭಾವ ಹೆಚ್ಚಿಲ್ಲದಿದ್ದರೂ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದ್ದರು. ಆದರೆ ಈ ಚುನಾವಣೆಯಲ್ಲೂ ಇದಕ್ಕೆ ಅವಕಾಶ ಮಾಡಿಕೊಡಬಾರದೆಂದು ಮನಗೂಳಿ ಈಗಿನಿಂದಲೇ ತಂತ್ರ ರೂಪಿಸುತ್ತಿದ್ದು, ಈ ಬಾರಿ ಬಿಜೆಪಿ, ಜೆಡಿಎಸ್ ಮಧ್ಯೆ ಪ್ರಬಲ ಸ್ಪರ್ಧೆ ಏರ್ಪಡಲಿದೆ.
ಸ್ವಾತಂತ್ರ್ಯ ಹೋರಾಟಗಾರ ವಾಸುದೇವ ಬಲವಂತರಾಯ ಪಡಖೇ ಸೆರೆಸಿಕ್ಕ ದೇವರನಾವದಗಿ ದೇವಾಲಯವಿರುವುದು ಸೀಮದಗಿ ತಾಲೂಕಿನಲ್ಲೇ. ವಿಜಯಪುರದ ಪ್ರಸಿದ್ಧ ತಾಣಗಳಲ್ಲಿ ಸಿಂದಗಿಯೂ ಒಂದು. ರಮೇಶ ಭುಸನೂರ 37834 ಮತಗಳನ್ನು ಪಡೆದಿದ್ದರೆ, 37082 ಮತಗಳನ್ನು ಪಡೆಯುವ ಮೂಲಕ ಜೆಡಿಎಸ್ ನ ಎಂ.ಸಿ.ಮನಗೂಳಿ ತೀವ್ರ ಪ್ರತಿಸ್ಪರ್ಧೆ ಒಡ್ಡಿದ್ದರು.
Comments