ಸರ್.ಸಿ.ವಿ. ರಾಮನ್ ನಗರ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜೆಡಿಎಸ್ ಅಭ್ಯರ್ಥಿ ಯಾರು ಗೊತ್ತಾ?
ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ಬಿಜೆಪಿ, ಕಾಂಗ್ರೆಸ್,ಜೆಡಿಎಸ್ ಸದಸ್ಯರು ಕಣ್ಣಿಟ್ಟಿದ್ದು ಶತಾಯಗತಾಯ ವಿಜಯ ಸಾಧಿಸುವತ್ತ ಕಸರತ್ತು ನಡೆಸುತ್ತಿದ್ದಾರೆ. ಸರ್.ಸಿ.ವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ವಿಪಕ್ಷಗಳನ್ನು ಮಣಿಸಲು ಜೆಡಿಎಸ್ ರಣತಂತ್ರ ನಡೆಸುತ್ತಿದೆ. ಈ ಭಾರಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಮಾಸ್ಟರ್ ಪ್ಲಾನ್ ಮಾಡುತ್ತಿದೆ.
ಸರ್.ಸಿ.ವಿ. ರಾಮನ್ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಮಾಜಿ ಪಾಲಿಕೆ ಸದಸ್ಯ ಟಿ.ಮಲ್ಲೇಶ್ ರವರು ಸ್ಪರ್ಧಿಸುವುದು ಖಚಿತವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments