ನಾಸ್ತಿಕರಾಗಿದ್ದ ಸಿಎಂ ಸಿದ್ಧರಾಮಯ್ಯ, ಅಧಿಕಾರದ ಚುಕ್ಕಾಣಿ ಹಿಡಿಯಲು ಆಸ್ತಿಕರಾದ್ರಾ...?

ಮುಖ್ಯಮಂತ್ರಿ ಸಿದ್ದರಾಮಯ್ಯ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ದೇವಾಲಯಕ್ಕೆ ಕೊಡುಗೆಗಳನ್ನು ನೀಡಲು ನಿರ್ಧರಿಸಿದ್ದಾರೆ. ಬೆಳ್ಳಿಯ ಕಿರೀಟ, ಖಡ್ಗ ಮುಂತಾದವುಗಳನ್ನು ಅವರು ದೇವಾಲಯಕ್ಕೆ ನೀಡಲಿದ್ದಾರೆ. ಚಾಮರಾಜನಗರಕ್ಕೆ ಭೇಟಿ ಕೊಟ್ಟರೆ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂಬ ನಂಬಿಕೆಯನ್ನು ಸಿದ್ದರಾಮಯ್ಯ ಅವರು ಮುರಿದಿದ್ದಾರೆ.
ಈಗಾಗಲೇ ಅವರು 10 ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರಿಗೆ ಹಲವಾರು ಉಡುಗೊರೆಗಳು ಬಂದಿವೆ. ತಮಗೆ ಬಂದ ಬೆಳ್ಳಿಯ ರಥ, ಖಡ್ಗ, ಕಿರೀಟಗಳನ್ನು ದೇವಾಲಯಕ್ಕೆ ನೀಡಲು ಅವರು ನಿರ್ಧರಿಸಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಾಧಿಕಾರದ ಸಭೆಯಲ್ಲಿ ಬೆಳ್ಳಿಯ ಉಡುಗೊರೆಗಳನ್ನು ನೀಡುವ ಕುರಿತು ಸಿದ್ದರಾಮಯ್ಯ ವಿಷಯ ಪ್ರಸ್ತಾಪಿಸಿದ್ದಾರೆ. ಎಲ್ಲಾ ಕೊಡುಗೆಗಳನ್ನು ಸೇರಿಸಿ, ದೇವಾಲಯಕ್ಕೆ ಬೆಳ್ಳಿಯ ರಥ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ.
Comments