ತೆನೆ ಹೊರುವುದನ್ನು ಬಿಟ್ಟು ಕಮಲ ಹಿಡಿಯಲು ಮುಂದಾದ ಶಾಸಕರು
ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ್ ಪಾಟೀಲ್ ನಾಳೆ ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಕಾರ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಬಗ್ಗೆ ಗೌರವವಿದೆ. ಆದರೆ ಜಿಲ್ಲಾ ಜೆಡಿಎಸ್ ನಾಯಕರ ವರ್ತನೆಯಿಂದ ಬೇಸರಗೊಂಡಿದ್ದು, ಕಾರ್ಯಕರ್ತರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಮುಂದೆ ಸರ್ಕಾರ ರಚನೆ ಕನಸು ಕಾಣಿತ್ತಿರುವ ಜೆಡಿಎಸ್'ಗೆ ದೊಡ್ಡಮಟ್ಟದ ಹೊಡೆದ ಬಿದ್ದಿದೆ. ಈಗಾಗಲೇ ಪಕ್ಷದ ವಿರುದ್ಧ ಬಂಡೆದ್ದ 6 ಮಂದಿ ಶಾಸಕರನ್ನು ಅಮಾನತು ಮಾಡಿದ ನಂತರ ಉತ್ತರ ಕರ್ನಾಟಕದ ಇಬ್ಬರು ಶಾಸಕರು ರಾಜೀನಾಮೆಗೆ ನಿರ್ಧರಿಸಿದ್ದಾರೆ. ಲಿಂಗಸಗೂರು ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಕೂಡ ಜೆಡಿಎಸ್ ತೆರೆದು ಬಿಜೆಪಿ ಸೇರುವ ಸಾಧ್ಯತೆಯಿದೆ. ಈ ಇಬ್ಬರು ನಾಯಕರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ವಕ್ತಾರ ರಮೇಶ್ ಬಾಬು ನಾವೇ ಅವರಿಬ್ಬರನ್ನು ಪಕ್ಷದಿಂದ ಹೊರ ಕಳುಹಿಸುತ್ತಿರುವುದಾಗಿ ತಿಳಿಸಿದ್ದಾರೆ.
Comments