ಮಾಲೂರು ಕ್ಷೇತ್ರದಿಂದ ಸ್ಪರ್ಧಿಸಲಿರುವ ಜೆಡಿಎಸ್ ಅಭ್ಯರ್ಥಿ ಯಾರು ಗೊತ್ತಾ?

ಕೋಲಾರ : ಕೋಲಾರ ಜಿಲ್ಲೆಯಲ್ಲಿ 2018ರ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದೆ. ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರ ಕ್ಷೇತ್ರ ಮಾಲೂರಿನಲ್ಲಿ ಜೆಡಿಎಸ್ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ.
2013ರ ಚುನಾವಣೆಯಲ್ಲಿ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರು ಮಾಲೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು.ಮಾಲೂರು ಕ್ಷೇತ್ರದ ಶಾಸಕರು ಜೆಡಿಎಸ್‌ನ ಕೆ.ಎಸ್.ಮಂಜುನಾಥ ಗೌಡ. 2013ರ ಚುನಾವಣೆಯಲ್ಲಿ ಅವರು ಕ್ಷೇತ್ರದಲ್ಲಿ 57, 645 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿಯೂ ಅವರಿಗೆ ಟಿಕೆಟ್ ನೀಡುವುದು ಖಚಿತವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments