ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಹಂಚಿಕೆಗೆ ಮೂರು ಸೂತ್ರ..!!

ಹೈಕಮಾಂಡ್ ಮತ್ತು ರಾಜ್ಯ ನಾಯಕರು ಟಿಕೆಟ್ ಹಂಚಿಕೆಯತ್ತ ಗಮನ ಹರಿಸಿದ್ದಾರೆ. ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ಬಗ್ಗೆ ಅಮಿತ್ ಶಾ ಅವರೇ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಈ ಬಗ್ಗೆ ರಾಜ್ಯ ನಾಯಕರಿಗೂ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.
ಒಗ್ಗಟ್ಟಾಗಿರಲು ಸೂಚನೆ ಬಳ್ಳಾರಿ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಟಿಕೆಟ್ ಆಕಾಂಕ್ಷಿ ನಾಯಕರು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಎರಡು ಬಾರಿ ಕರ್ನಾಟಕಕ್ಕೆ ಬಂದು ಹೋದ ಅಮಿತ್ ಶಾ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ. ಆದ್ದರಿಂದ, ಯಾವ ನಾಯಕರು ಟಿಕೆಟ್ ಬಗ್ಗೆ ಬಹಿರಂಗ ಹೇಳಿಕೆ ಕೊಡುತ್ತಿಲ್ಲ. ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಬಾರದು ಎಂದು ಅಮಿತ್ ಶಾ ಈಗಾಗಲೇ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರ ನಾಯಕರಿಗೆ ಸೂಚನೆ ನೀಡಿದ್ದಾರೆ.
ಹಾಲಿ ಶಾಸಕರು, ಹೊಸದಾಗಿ ಪಕ್ಷಕ್ಕೆ ಸೇರಿದವರು, ಪರಿಷತ್, ಸಂಸತ್ ಸದಸ್ಯರು ಹೀಗೆ ಮೂರು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಮೊದಲು ಹಾಲಿ ಶಾಸಕರು ಇರುವ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಎರಡು ಸಮೀಕ್ಷೆಗಳನ್ನು ಎಲ್ಲಾ ಕ್ಷೇತ್ರಗಳಲ್ಲಿ ನಡೆಸಲಾಗುತ್ತಿದ್ದು ನಂತರ ಯಾರು ಅಭ್ಯರ್ಥಿ? ಎಂಬುದನ್ನು ಅಂತಿಮಗೊಳಿಸಲಾಗುತ್ತದೆ. ಟಿಕೆಟ್ ಹಂಚಿಕೆ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ, ಗೊಂದಲ ನಿವಾರಿಸಲು ಬಿಜೆಪಿ ನಿರ್ಧರಿಸಿದೆ. ಜನವರಿ 9ರಂದು ರಾಜ್ಯ ನಾಯಕರ ಜೊತೆ ಅಮಿತ್ ಶಾ ಈ ಕುರಿತು ಚರ್ಚೆ ನಡೆಸಿದ್ದಾರೆ. ಅಭ್ಯರ್ಥಿ ಘೋಷಣೆ ಮಾಡಿದ ಬಳಿಕ ಅವರು ಅಧಿಕೃತವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ.
Comments