ಜೆಡಿಎಸ್ ನಿಂದ ಪಕ್ಷಾಂತರಗೊಂಡ ಇಬ್ಬರು ಶಾಸಕರ ವಿರುದ್ಧ, ಸ್ಪೀಕರ್ ಗೆ ಶರವಣ ದೂರು

ಇಬ್ಬರು ಶಾಸಕರ ವಿರುದ್ಧ ಜೆಡಿಎಸ್ ನಿಂದ ಪಕ್ಷಾಂತರ ನಿಷೇಧ ಕಾಯ್ದೆಯ ಅಡಿಯಲ್ಲಿ ದೇವೆಗೌಡರ ಸೂಚನೆಯಂತೆ ರಾಯಚೂರಿನ ಮಾನಪ್ಪ ಬಜ್ಜಲ್, ಶಿವರಾಜ್ ಪಾಟೀಲ್ ವಿರುದ್ಧ ಜೆಡಿಎಸ್ ನ ಶರವಣ ಅವರು ಸ್ಪಿಕರ್ ಅವರಿಗೆ ದೂರು ನೀಡಿದ್ದಾರೆ. ಇದೇ ವೇಳೆ ಸ್ಪಿಕರ್ ಅವರಿಗೆ ದೂರು ನೀಡಿದ ಬಳಿಕ ಮಾತನಾಡಿದ ಶರವಣ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಲಿಂಗಸುಗೂರು ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಹಾಗೂ ರಾಯಚೂರು ನಗರ ಜೆಡಿಎಸ್ ಶಾಸಕ ಡಾ. ಶಿವರಾಜ ಪಾಟೀಲ್ ಅವಕಾಶ ನೀಡದಂತೆ ಮನವಿ ಮಾಡಿಕೊಂಡಿದ್ದೇವೆ ಅಂತ ಹೇಳಿದರು.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಇಬ್ಬರು ಜೆಡಿಎಸ್ ಶಾಸಕರು ಗುರುವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಲಿಂಗಸುಗೂರು ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಹಾಗೂ ರಾಯಚೂರು ನಗರ ಜೆಡಿಎಸ್ ಶಾಸಕ ಡಾ. ಶಿವರಾಜ ಪಾಟೀಲ್ ಅವರು ಮಧ್ಯಾಹ್ನ ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವರಾದ ಅನಂತಕುಮಾರ್, ಪಿಯೂಶ್ ಗೊಯಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಮುರುಳೀಧರ ರಾವ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
Comments