ಭಟ್ಕಳ-ಹೊನ್ನಾವರ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜೆಡಿಎಸ್ ಅಭ್ಯರ್ಥಿ ಯಾರು ಗೊತ್ತಾ?
ಮುಂಬರುವ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹಿನ್ನೆಲೆ,ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಕಣಕ್ಕೆ ಇಳಿಯಲು ಕಸರತ್ತು ಆರಂಭಿಸಿವೆ. ಮತೀಯ ಸೂಕ್ಷ್ಮ ಪ್ರದೇಶವಾದ ಭಟ್ಕಳ-ಹೊನ್ನಾವರ ಕ್ಷೇತ್ರದಲ್ಲಿಯೂ ಚುನಾವಣಾ ಕಾವು ಏರತೊಡಗಿದೆ. ಕ್ಷೇತ್ರದಲ್ಲಿ, ಜೆಡಿಎಸ್ ಅಭ್ಯರ್ಥಿ ಈಗಾಗಲೇ ಅಂತಿಮಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಜೆಡಿಎಸ್‌ನ ಇನಾಯತ್ ಉಲ್ಲಾ ಶಾಬಂದ್ರಿ ಕೂಡ ತೆರೆಮರೆಯಲ್ಲಿ ಭಟ್ಕಳದಲ್ಲಿ ಸ್ಪರ್ಧಿಸಿ, ಮುಸ್ಲಿಂ ಮತಗಳ ಬೆಂಬಲದಿಂದ ಗೆಲುವು ಸಾಧಿಸಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಚುನಾವಣೆಗೆ ನಿಂತರೆ ಮುಸ್ಲಿಂ ಮತಗಳನ್ನು ಸಂಪೂರ್ಣವಾಗಿ ಇವರೇ ಬಾಚಿಕೊಳ್ಳುವುದು ಖಚಿತ ಎಂಬ ಮಾತಿದೆ . ಈಗಾಗಿ ಇನಾಯತ್ ಉಲ್ಲಾ ಶಾಬಂದ್ರಿ ಜೆಡಿಎಸ್‌ನಿಂದ ಕಣಕ್ಕಿಳಿಯುವುದು ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.
Comments