ಯುವ ಮತದಾರರನ್ನು ತಮ್ಮತ್ತ ಸೆಳೆಯಲು ಬಿಜೆಪಿಯಿಂದ ಮಾಸ್ಟರ್ ಪ್ಲಾನ್ ..!!

ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಿದ್ದಾರೆ. ಸುಮಾರು 17,000 ಯುವಕರನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಮತ್ತು ಅಲ್ಲಿನ ಬಿಜೆಪಿ ರಾಜ್ಯಾಧ್ಯಕ್ಷ ಮಹೇಂದ್ರನಾಥ ಪಾಂಡೆ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
2019ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುವ ಮತದಾರರನ್ನು ಸೆಳೆಯಲು ಬಿಜೆಪಿ 'ಯುವ ಉದ್ಘೋಷ್ ಕಾರ್ಯಕ್ರಮ' ಹಮ್ಮಿಕೊಂಡಿದೆ. ಸದ್ಯ 17 ವರ್ಷ ಪೂರ್ಣಗೊಂಡಿರುವ, ಮುಂದಿವ ವರ್ಷ ಮತದಾನಕ್ಕೆ ಅರ್ಹತೆ ಪಡೆಯುವ ಯುವಕರನ್ನು ಪಕ್ಷದತ್ತ ಸೆಳೆಯುವುದು ಬಿಜೆಪಿಯ ಗುರಿ ಎನ್ನಲಾಗಿದೆ.
Comments