ಭದ್ರಾವತಿ ಕೋಟೆಯಲ್ಲಿ ಜೆಡಿಎಸ್ ಗೆ ಗೆಲುವು ಕಟ್ಟಿಟ್ಟ ಬುತ್ತಿ...!!

ಜೆಡಿಎಸ್ ನ ಭದ್ರ ಕೋಟೆಯಾಗಿರುವ ಭದ್ರಾವತಿ ಕ್ಷೇತ್ರದಲ್ಲಿ ಕಳೆದ 2013 ರ ಚುನಾವಣೆಯಲ್ಲಿ ಅಪ್ಪಾಜಿ ಗೌಡ ಅವರು 78,370 ಮತಗಳನ್ನು ಪಡೆದು ಜಯಗಳಿಸಿದ್ದರು. ಈಗಾಗಿ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ ಬಾರಿಸುವುದು ಎಂದು ಮೂಲಗಳು ತಿಳಿಸುತ್ತಿವೆ. ಭದ್ರಾವತಿ ಕೋಟೆಯಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು ಹಿಂದಿಕ್ಕಲು ಜೆಡಿಎಸ್ ರಣತಂತ್ರ ರೂಪಿಸುತ್ತಿದೆ.
ಜೆಡಿಎಸ್ ನಿಂದ ಅಪ್ಪಾಜಿ ಗೌಡ ಅವರು ಪ್ರಮುಖ ನಾಯಕರು. ಬಿಜೆಪಿಗೆ ಇಲ್ಲಿ ಪ್ರಮುಖ ನಾಯಕರ ಕೊರತೆ ಇದೆ, ಇದು ಜೆಡಿಎಸ್ ಗೆ ಪ್ಲಸ್ ಪಾಯಿಂಟ್ ಆಗಲಿದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರು ಸಹ ಜೆಡಿಎಸ್ ಜೊತೆ ಕೈ ಜೋಡಿಸಿರುವುದರಿಂದ ಜೆಡಿಎಸ್ ಗೆ ಆನೆ ಬಲ ಬಂದಂತಾಗಿದೆ. ಈ ಕ್ಷೇತ್ರದಲ್ಲಿ ಕಮಲ ಆರಳಿಸುವ ಪ್ರಯತ್ನವೂ ಸಾಗದೆ ಇರುವುದರಿಂದ ಅಪ್ಪಾಜಿ ಗೌಡ ಶಾಸಕರಾಗಿ ಆಯ್ಕೆಯಾಗುತ್ತಾರೆ ಎನ್ನಲಾಗಿದೆ. ಕಳೆದ ಬಾರಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಬಿ.ಕೆ.ಸಂಗಮೇಶ ಪಕ್ಷೇತರರಾಗಿ ಸ್ಪರ್ಧಿಸಿ ಸೋಲು ಕಂಡಿದ್ದಾರೆ. ಅಪ್ಪಾಜಿ ಗೌಡ ಪ್ರಸ್ತುತ ಕ್ಷೇತ್ರದ ಶಾಸಕರಾಗಿದ್ದಾರೆ.
Comments