ಅನಿಲ್ ಚಿಕ್ಕಮಾದುರವರು ಜೆಡಿಎಸ್ ನಿಂದಲೇ ಸ್ಪರ್ಧಿಸಲಿದ್ದಾರೆ : ಎಚ್ ವಿಶ್ವನಾಥ್ ಸ್ಪಷ್ಟನೆ

ಜೆಡಿಎಸ್ ಪಕ್ಷದ ಶಾಸಕ ದಿವಂಗತ ಚಿಕ್ಕಮಾದು ಕುಟುಂಬಕ್ಕೆ ಕಾಂಗ್ರೆಸ್ ಗಾಳ ಹಾಕುತ್ತಿರುವ ಸುದ್ದಿ ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ಜೆಡಿಎಸ್ ಮುಖಂಡರು ಈ ಕುಟುಂಬದ ನಿವಾಸಕ್ಕೆ ಭೇಟಿ ನೀಡಿ ಸ್ಪಷ್ಟ ಪಡಿಸಿದ್ದಾರೆ. ಜೆಡಿಎಸ್ ಮುಖಂಡರು ಚಿಕ್ಕಮಾದು ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ್ದಾರೆ. ಚಿಕ್ಕಮಾದು ಪುತ್ರ ಅನಿಲ್ಗೆ ಹೆಗ್ಗಡದೇವನಕೋಟೆ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಕೊಡುವುದಾಗಿ ಭರವಸೆ ನೀಡಿರುವುದು ತಿಳಿದುಬಂದಿದೆ.
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರೇ ಖುದ್ದಾಗಿ ದೂರವಾಣಿ ಕರೆ ಮಾಡಿ ಟಿಕೆಟ್ ಕೊಡುವ ಭರವಸೆ ನೀಡಿದ್ದಾರೆ ಎಂದು ಅನಿಲ್ ಚಿಕ್ಕಮಾದು ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ಮುಖಂಡರಾದ ಹೆಚ್.ವಿಶ್ವನಾಥ್, ಸಾ.ರಾ.ಮಹೇಶ್ ಮೊದಲಾದವರೂ ಕೂಡ ಚಿಕ್ಕಮಾದು ಅವರ ಮನೆಗೆ ಹೋಗಿ ಭೇಟಿ ಮಾಡಿಬಂದಿದ್ದಾರೆ. ಅನಿಲ್ಗೆ ಜೆಡಿಎಸ್ನಿಂದ ಟಿಕೆಟ್ ಸಿಗಲಿರುವುದನ್ನೂ ಅವರು ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ನ ಮೊದಲ ಪಟ್ಟಿಯಲ್ಲೇ ಅನಿಲ್ಗೆ ಟಿಕೆಟ್ ಕೊಡುತ್ತೇವೆ. ಇನ್ನೆರಡು ದಿನಗಳಲ್ಲಿ ಹೆಚ್.ಡಿ.ಕೆ.ಯವರೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ಸಂಸದ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.
Comments