ಬಂದ್ ಹಿಂದೆ ಸಿಎಂ ಕೈವಾಡ : ಜಗದೀಶ್ ಶೆಟ್ಟರ್ ಆರೋಪ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ ಬಂಡೂರಿ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಜ. 25 ಮತ್ತು ಫೆ. 4 ರಂದು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದ್ದಾರೆ. ಈ ಬಂದ್ ಗೆ ಸಿಎಂ ಸಿದ್ದರಾಮಯ್ಯ ಬೆಂಬಲ ನೀಡಿದ್ದಾರೆ ಎಂದು ದೂರಿದರು.
ಕಳಸಾ ಬಂಡೂರಿ ಹಾಗೂ ಮಹದಾಯಿ ಅನುಷ್ಠಾನಕ್ಕೆ ಕರೆ ನೀಡಲಾಗುತ್ತಿರುವ ಎಲ್ಲಾ ಬಂದ್ ಗಳು ಸರ್ಕಾರಿ ಪ್ರಾಯೋಜಿತ ಬಂದ್ ಗಳು ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಗಂಭೀರ ಆರೋಪ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರ ಕುತಂತ್ರದಿಂದ ಬಂದ್ ಗೆ ಕರೆ ನೀಡಲಾಗಿದೆ. ಇವರೆಗೂ ರಾಹುಲ್ ಗಾಂಧಿ ಮೌನವಾಗಿದ್ದಾರೆ? ರಾಹುಲ್ ತಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದರು.
Comments