ಮಾಜಿ ಸಚಿವ ಬಿ.ಎ.ಮೊಹಿದಿನ್ ರವರ ಆರೋಗ್ಯ ವಿಚಾರಿಸಿದ ಎಚ್ ಡಿ ದೇವೇಗೌಡ್ರು

ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ.ಎ.ಮೊಹಿದಿನ್ ಅವರನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೋಮವಾರ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಬಿ.ಎ.ಮೊಹಿದಿನ್ ಅನಾರೋಗ್ಯ ಕಾರಣ ಕಳೆದ ಕೆಲವು ದಿನಗಳಿಂದ ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರಿಗೆ ಆಗಮಿಸಿ ಇಲ್ಲೇ ಉಳಿದುಕೊಂಡಿದ್ದ ಎಚ್.ಡಿ.ದೇವೇಗೌಡ ಅವರು ಇಂದು ಬಿ.ಎ.ಮೊಹಿದಿನ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಯೆನೆಪೊಯ ಅಬ್ದುಲ್ಲಾ ಕುಂಞಿ, ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್ ಜೊತೆಗಿದ್ದರು.
Comments