ಪಕ್ಷದ ನಾಯಕರಿಗೆ ಖಡಕ್ ಸೂಚನೆ ಕೊಟ್ಟ ಅಮಿತ್ ಶಾ
ಹೊಸ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯವನ್ನು ರಾಜ್ಯ ನಾಯಕರು ಹೊಂದಿರಬೇಕು. ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಬದಲು ಹಿರಿಯ ನಾಯಕರು ಹೊಸ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂದು ಅವರು ಸೂಚಿಸಿದ್ದಾರೆ. ಇದರಿಂದಾಗಿ ಕಂಗಾಲಾಗಿರುವ ಹಿರಿಯ ಶಾಸಕರು ಒಟ್ಟಾಗಿ ಸೇರಿ ಚರ್ಚೆ ನಡೆಸಿದ್ದಾರೆ. ಇಷ್ಟು ದಿನಗಳ ಕಾಲ ಪ್ರತಿನಿಧಿಸಿದ್ದ ಕ್ಷೇತ್ರಗಳಲ್ಲಿ ಓಟ್ ಬ್ಯಾಂಕ್ ಭದ್ರಪಡಿಸಿಕೊಂಡಿದ್ದು, ಈಗ ಕ್ಷೇತ್ರ ಬದಲಾವಣೆಗೆ ಸೂಚಿಸಿದರೆ ಗೆಲುವು ಕಷ್ಟಸಾಧ್ಯವಾಗಲಿದೆ ಎಂದು ಆತಂಕ್ಕೆ ಒಳಗಾಗಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸುತ್ತಿರುವ, ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪಕ್ಷದ ಘಟಾನುಘಟಿ ನಾಯಕರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. 3 ಕ್ಕಿಂತ ಹೆಚ್ಚು ಸಲ ಒಂದೇ ಕ್ಷೇತ್ರದಿಂದ ಚುನಾಯಿತರಾದ ಶಾಸಕರಿಗೆ ಕ್ಷೇತ್ರವನ್ನು ಬದಲಿಸುವಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ. ರಾಜ್ಯದ ಎಲ್ಲಾ ಹಿರಿಯ ನಾಯಕರಿಗೆ, ಮಾಜಿ ಸಚಿವರು, ಶಾಸಕರಿಗೆ ಅಮಿತ್ ಶಾ ಸೂಚನೆ ನೀಡಿದ್ದು, ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ತಿಳಿಸಿದ್ದಾರೆ. ಕ್ಷೇತ್ರ ಬದಲಾವಣೆಯ ಬದಲಿಗೆ ತಮ್ಮ ಕ್ಷೇತ್ರಗಳಲ್ಲಿಯೇ ಸ್ಪರ್ಧಿಸಿ, ಹೊಸ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವುದಾಗಿ ಮನವರಿಕೆ ಮಾಡಿಕೊಡಲು ಮುಂದಾಗಿದ್ದಾರೆ.
Comments