ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಮಣಿಸಲು ಜೆಡಿಎಸ್ ಮಾಸ್ಟರ್ ಪ್ಲಾನ್

ಸಾರ್ವತ್ರಿಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ರಾಜ್ಯದಲ್ಲಿ ಪ್ರತಿಷ್ಠಿತ ಕ್ಷೇತ್ರವಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.
ಖಾಸಗಿ ಹೋಟೆಲ್ ನಲ್ಲಿ ಕ್ಷೇತ್ರದಲ್ಲಿರುವ ಕುರುಬ ಸಮುದಾಯದ ಮುಖಂಡರ ಸಭೆ ನಡೆಸಲಾಗಿದ್ದು,ಶಾಸಕ ಜಿ.ಟಿ.ದೇವೇಗೌಡ ಈ ಬಾರಿಯ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಕುರುಬ ಸಮುದಾಯದ ಮುಖಂಡರು ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಕುರುಬ ಸಮುದಾಯದ ಮುಖಂಡರನ್ನು ಸಿದ್ದರಾಮಯ್ಯ ಕಡೆಗಣಿಸಿದ್ದಾರೆ. ಜೊತೆಗೆ ಈ ಸಮುದಾಯದ ವ್ಯಕ್ತಿಗಳನ್ನು ಬೆಳೆಯೋದಕ್ಕೆ ಸಿದ್ದರಾಮಯ್ಯ ಬಿಡೋಲ್ಲ. ಹೀಗಾಗಿ ಈ ಬಾರಿ ಸಿದ್ದರಾಮಯ್ಯನವರಿಗೆ ನೀವು ತಕ್ಕ ಪಾಠ ಕಲಿಸಬೇಕೆಂದು ಬೀರಿಹುಂಡಿ ಬಸವಣ್ಣ ಮನವಿ ಮಾಡಿದರು.
ಮುಖ್ಯಮಂತ್ರಿಯಾದ ಬಳಿಕ ಕ್ಷೇತ್ರದ ಜನರನ್ನು ಸಂಪೂರ್ಣವಾಗಿ ಸಿದ್ದರಾಮಯ್ಯ ಮರೆತಿದ್ದಾರೆಂದು, ಮುಖಂಡರಿಗೆ ತಿಳಿಸಿದರು. ಸಭೆಯಲ್ಲಿ ಸುಮಾರು 8೦೦ ಕ್ಕೂ ಹೆಚ್ಚು ಕುರುಬ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.ಸಭೆಯಲ್ಲಿ ಜಿಟಿಡಿ, ಜಿ.ಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ಬೆಳವಾಡಿ ಶಿವಮೂರ್ತಿ, ಕೋಟೆಹುಂಡಿ ಮಹದೇವು, ಹಿನ್ಕಲ್ ರಾಜಣ್ಣ, ಪ್ರೇಮ, ತಾ.ಪಂ. ಚಿಕ್ಕತಾಯಮ್ಮ, ಗ್ರಾ. ಪಂ ಅಧ್ಯಕ್ಷರುಗಳು, ಸದಸ್ಯರುಗಳು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Comments