ಜಿಲ್ಲಾಧಿಕಾರಿ ರೋಹಿಣಿ ವರ್ಗಾವಣೆ : ಜ.25 ರಂದು ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಷಯ ಮುಖ್ಯ ಕಾರ್ಯದರ್ಶಿಗೆ ಗೊತ್ತೇ ಇಲ್ಲ. ಕಾಂಗ್ರೆಸ್ ನವರು ದೂರು ಕೊಟ್ಟ ಕೂಡಲೇ ವರ್ಗಾವಣೆ ಮಾಡಿದ್ದು ಸರಿಯಲ್ಲ, ರಾಜ್ಯ ಸರ್ಕಾರ ಯಾರ ಪರ ಎಂದು ಶಾಸಕ ಎಚ್. ಡಿ ರೇವಣ್ಣ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಚುನಾವಣಾ ಸಿದ್ದತಾ ಕಾರ್ಯ ನಡೆಯುತ್ತಿದೆ.ಈ ನಡುವೆಯೇ ರಾಜಕೀಯ ಪಿತೂರಿ ನಡೆಸಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಕಿಡಿಕಾರಿದರು.ಯಾವ ಕಾರಣಕ್ಕೆ ವರ್ಗಾವಣೆ ನಡೆದಿದೆ ಎಂಬುದನ್ನು ತಿಳಿಸಬೇಕು. ಕೇಂದ್ರ-ರಾಜ್ಯ ಚುನಾವಣಾ ಆಯೋಗ ಮಧ್ಯೆ ಪ್ರವೇಶ ಮಾಡಬೇಕು. ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗುವುದು. ಜ.25 ರಂದು ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ.
Comments